(Gruha Lakshmi;) ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ
ಆರೋಗ್ಯ ಕ್ಷೇತ್ರದಲ್ಲೂ ಹಲವು ಘೋಷಣೆಗಳನ್ನು ಮಾಡಲಾಗಿದೆ. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣ ಘಟಕ ಸ್ಥಾಪಿಸುವ ಯೋಜನೆಯನ್ನೂ ಘೋಷಿಸಲಾಗಿದೆ.
ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!
ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಸಿಎಂ, ಕರ್ನಾಟಕ ಆರ್ಥಿಕ ಅಭಿವೃದ್ಧಿಯಲ್ಲಿ ದೇಶದ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಜೊತೆಗೆ ಒಕ್ಕೂಟ ಸರ್ಕಾರವು ರಾಜ್ಯಗಳತ್ತ ಇನ್ನಷ್ಟು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruha Lakshmi;)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





