(Gruha Lakshmi DBT:) ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Lakshmi Hebbalkar ಸಿಹಿ ಸುದ್ದಿ ನೀಡಿದ್ದಾರೆ. ಮುಂದಿನ 10 ದಿನಗಳೊಳಗೆ ಎರಡು ತಿಂಗಳ ಬಾಕಿ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬಾಗಲೂರು ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬಾಕಿ ಇರುವ ಮೊತ್ತವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರ ಪ್ರಕಾರ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಮುಂದಿನ 4 ರಿಂದ 5 ದಿನಗಳೊಳಗೆ ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಅದರ ಬೆನ್ನಲ್ಲೇ ಏಪ್ರಿಲ್ ತಿಂಗಳ ಹಣವೂ ಇಂದಿನಿಂದ 8 ರಿಂದ 10 ದಿನಗಳೊಳಗೆ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.
ಈ ಮೂಲಕ ಎರಡು ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಮಹಿಳೆಯರಿಗೆ ತಲುಪಿಸುವ ಭರವಸೆಯನ್ನು ಸರ್ಕಾರ ನೀಡಿದೆ.
ಇದೇ ವೇಳೆ ತಮ್ಮ ರಾಜಕೀಯ ಜೀವನದ ಕುರಿತು ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ನನಗೆ ಕೆಲಸ ಮಾಡುವುದು ಒಂದು ರೀತಿಯ ಹುಚ್ಚು. 2013ರ ಚುನಾವಣೆಯಲ್ಲಿ ಸೋತಾಗಲೂ ನಾನು ಧೃತಿಗೆಡದೆ ಜನರ ನಡುವೆ ಇದ್ದು ಕೆಲಸ ಮಾಡಿದ್ದೇನೆ. ಬೇರೆಯವರಂತೆ ನಾಟಕ ಮಾಡುವುದು ನನಗೆ ಗೊತ್ತಿಲ್ಲ. ಸಮಾಜಕ್ಕೆ ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ,” ಎಂದು ಹೇಳಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruha Lakshmi DBT:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply