(Gruha Lakshmi Digital Marketing:) ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಮಹತ್ವದ ಪಾತ್ರ ವಹಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಡಿಜಿಟಲ್ ಮಾರ್ಕೆಟಿಂಗ್ ವೇದಿಕೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ತಮ್ಮ ಉತ್ಪನ್ನಗಳು ಹಾಗೂ ಸೇವೆಗಳಿಗೆ ಉತ್ತಮ ಮಾರುಕಟ್ಟೆ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಬಲಿಷ್ಠರಾಗಲು ಸಹಾಯವಾಗಲಿದೆ ಎಂದು ಹೇಳಿದರು.
ಸಚಿವೆ ಮಾತನಾಡಿ, “ಗೃಹಲಕ್ಷ್ಮಿ ಯೋಜನೆಯಡಿ ದೊರೆಯುವ ಆರ್ಥಿಕ ನೆರವಿನ ಜೊತೆಗೆ ಡಿಜಿಟಲ್ ಮಾರ್ಕೆಟಿಂಗ್ ವ್ಯವಸ್ಥೆಯನ್ನು ಪರಿಚಯಿಸುವುದು ಮಹಿಳೆಯರ ಆದಾಯ ಹೆಚ್ಚಿಸುವ ದಿಕ್ಕಿನಲ್ಲಿ ಸರ್ಕಾರ ಕೈಗೊಂಡ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಮಹಿಳೆಯರು ಮನೆಮಟ್ಟದಲ್ಲಿ ತಯಾರಿಸುವ ಉತ್ಪನ್ನಗಳು, ಸ್ವಯಂ ಉದ್ಯೋಗ ಚಟುವಟಿಕೆಗಳು ಮತ್ತು ಸಣ್ಣ ವ್ಯಾಪಾರಗಳಿಗೆ ಈ ಡಿಜಿಟಲ್ ವೇದಿಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ” ಎಂದು ತಿಳಿಸಿದರು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ನ್ನು ಫಲಾನುಭವಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಸರ್ಕಾರ ವಿಶೇಷ ಗಮನಹರಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಾಗಾರಗಳ ಮೂಲಕ ಆ್ಯಪ್ ಬಳಕೆ ವಿಧಾನ, ಆನ್‌ಲೈನ್ ಮಾರಾಟ, ಡಿಜಿಟಲ್ ಪಾವತಿ ವ್ಯವಸ್ಥೆ ಹಾಗೂ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸುವ ಕುರಿತು ತರಬೇತಿ ನೀಡಲಾಗುತ್ತದೆ ಎಂದು ಸಚಿವೆ ತಿಳಿಸಿದರು.
ಈ ಯೋಜನೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳೆಯರು ಸಮಾನವಾಗಿ ಲಾಭ ಪಡೆಯಲಿದ್ದು, ಮಹಿಳಾ ಸ್ವಾವಲಂಬನೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಪ್ರಮುಖ ಸಾಧನವಾಗಲಿದೆ ಎಂದು ಅವರು ಹೇಳಿದರು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Gruha Lakshmi Digital Marketing:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ





