Gruha Lakshmi: ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ಮಾಸಿಕವಾಗಿ 2 ಸಾವಿರ ರೂ.ಗಳನ್ನು ನೀಡುವ ಯೋಜನೆಗೆ ಜುಲೈ 19 ( ನಾಳೆಯಿಂದ) ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿರುವ ಮನೆ ಯಜಮಾನಿಯನ್ನೇ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಹತೆಗಳೇನು?, ಯಾವುದೆಲ್ಲಾ ದಾಖಲಾತಿಗಳು ಬೇಕು?, ಎಲ್ಲಿ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಾಂಕ ಯಾವಾಗ ಇದೆಲ್ಲಾ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಹಿಂದೂ ದೇಗುಲಗಳೇ ಟಾರ್ಗೆಟ್; 150 ವರ್ಷ ಹಳೆಯ ಹಿಂದೂ ದೇವಾಲಯ ನೆಲಸಮ
ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:
* ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
* ಕುಟಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.
* ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ‘ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.

ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು:
* ಪಡಿತರ ಚೀಟಿಯ ಸಂಖ್ಯೆ
* ಯಜಮಾನಿಯ ಹಾಗೂ ಯಜಮಾನಿ ವತಿಯ ಆಧಾರ್ ಕಾರ್ಡ್ ಸಂಖ್ಯೆ
* ಯಜಮಾನಿಯ ಆಧಾಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 17-07-2023
ನೋಂದಣಿ ವಿಧಾನ:
* ಫಲಾನುಭವಿಗಳು ಗ್ರಾಮ ಜನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು. ಹಾಗೂ ಇದಲ್ಲದೆ “ಪ್ರಜಾ ಪ್ರತಿನಿಧಿ” ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
ಫಲಾನುಭವಿಯ ನೋಂದಾವಣಿಗೆ ಎಸ್.ಎಮ್.ಎಸ್ ಮೂಲಕ ಸ್ಥಳ ನಿಗದಿ:
ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
ಇದನ್ನೂ ಓದಿ; ಆಗುಂಬೆ ಘಾಟ್: ಆಕಸ್ಮಿಕವಾಗಿ ಘಾಟಿಯಿಂದ ಕೆಳಗೆ ಬಿದ್ದ ಮುಸ್ಲಿಂ ವ್ಯಕ್ತಿ
ಕೊನೆಯ ದಿನಾಂಕ ಯಾವಾಗ:
ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.
ಶುಲ್ಕ ಎಷ್ಟು:
ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.
ನಿಗದಿತ ಸಮಯ ಏನು?
ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನರಿಗಳು ಘೀಳಿಟ್ರೆ ಕಾಡಿನ ರಾಜ ಬೆದರೋದು ಉಂಟಾ?; ಜೆಡಿಎಸ್- ಬಿಜೆಪಿ ಮೈತ್ರಿ: ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?
- ಚಿಕ್ಕಮಗಳೂರು: ಕಾಫಿನಾಡ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
- ನೇತ್ರಾವತಿ ಪೀಕ್ ಚಾರಣಕ್ಕೆ 300 ಮಂದಿಗಷ್ಟೇ ಅವಕಾಶ; ಪ್ರವಾಸಿಗರಿಗೆ ನಿರಾಸೆ
ಹಾಗದರೆ ಫಲಾನುಭವಿಗಳಿಗೆ ಹಣಪಾವತಿ ಹೇಗೆ ಮಾಡುತ್ತಾರೆ?:
* ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/- ಗಳನ್ನು ನೇರ ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ.
* ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದಲ್ಲಿ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲು ಕುಟುಂಬದ ಯಜಮಾನಿಯ ಹೆಸರಿನಲ್ಲಿರುವ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹಯಾನ ರೂ. 2000/-ಗಳನ್ನು ಆರ್.ಟಿ.ಜಿ.ಎಸ್, ಮೂಲಕ ಜಮೆ ಮಾಡಲಾಗುವುದು.
Gruha Lakshmi ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ:
ಗೃಹಲಕ್ಷ್ಮಿ, ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ Troll free ಸಹಾಯವಾಣಿ ಸಂಖ್ಯೆ 1902 ಕ ಬೆಳೆಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ಕರೆ ಮಾಡಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.07.2023