Sunday, December 3, 2023
Homeರಾಜ್ಯಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಅರ್ಜಿ ಸಲ್ಲಿಸುವುದು ಹೇಗೆ? ಷರತ್ತುಗಳೇನು? ಇಲ್ಲಿದೆ ಮಾಹಿತಿ

ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಅರ್ಜಿ ಸಲ್ಲಿಸುವುದು ಹೇಗೆ? ಷರತ್ತುಗಳೇನು? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ (Gruha laksmi scheme)ಯೋಜನೆಗೆ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿಗೆ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿ.ಎಸ್.ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆಯಾಗಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮೂವರ ಭಾವಚಿತ್ರವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಅರ್ಜಿ ನಮೂನೆಯಲ್ಲಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ 2000 ರೂಪಾಯಿ ಸಹಾಯಧನ ಪಡೆಯಲು ರಾಜ್ಯ ಸರ್ಕಾರ ಹಲವು ಷರತ್ತುಗಳನ್ನು ವಿಧಿಸಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಇದನ್ನೂ ಓದಿ; ಕುಸಿದು ಬಿದ್ದು ವ್ಯಕ್ತಿ ಸಾವು; ಬ್ಯಾಟರಿ ಲೈಟ್‌ನಲ್ಲಿ ಮರಣೋತ್ತರ ಪರೀಕ್ಷೆ

ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಎಚ್ಚರಿಕೆ;
ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆಮಾಡಲಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ; ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಯುವಕರು ಸ್ಥಳದಲ್ಲೇ ಸಾವು

Most Popular

Recent Comments