Gruhalakhmi installment: ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!

(Gruhalakhmi installment) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ 2000 ಹಣ ಅರ್ಹ ಮಹಿಳೆಯರಿಗೆ ಜಮೆ ಆಗಿದ್ದು, ಜಮೆ ಆಗದೇ ಇರುವ ಮಹಿಳೆಯರು ತಪ್ಪದೆ ಈ ಕೆಲಸ ಮಾಡಿ. ಹಾಗಾದರೆ ಏನದು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ 10 ಡಿಸೆಂಬರ್ 2024 ರಂದು ಬಿಡುಗಡೆಯಾಗಿದ್ದು, ಪ್ರತಿ ದಿನ ಜಿಲ್ಲಾವಾರು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಹೆಚ್ಚಿನ ಫಲಾನುಭವಿಗಳು ಈಗಾಗಲೇ ಹಣವನ್ನು ಪಡೆದಿದ್ದಾರೆ. ಇನ್ನೂ ಕೆಲವರು ಗೃಹಲಕ್ಷ್ಮಿ 15ನೇ ಕಂತಿನ 2000 ರೂ. ಪಾವತಿಗಾಗಿ ಕಾಯುತ್ತಿದ್ದಾರೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?


ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ ಹೀಗಿದೆ ನೋಡಿ:
* ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ
* ಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
* ಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
* ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ
* ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ
* ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ
* ನಂತರ ಮುಖಪುಟದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಎಲ್ಲಾ ವಿವರಗಳನ್ನು ನೀವು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಹಣ ಬಾರದಿದ್ದರೆ ಯಜಮಾನಿಯರು ತಪ್ಪದೇ ಈ ಕೆಲಸ ಮಾಡಿ:
* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹೀಗಾಗಿ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
* ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.


ಇದನ್ನೂ ಓದಿ; ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000!


ಈ ರೀತಿ ಮಾಡಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮ್ಮ ಖಾತೆಗೆ ಬರಲಿದೆ.

Gruhalakhmi installment: ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!
Gruhalakhmi installment: ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!

ಇತ್ತೀಚಿನ ಜನಪ್ರಿಯ ಸುದ್ದಿಗಳು