Gruhalakshmi 2000: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ

(Gruhalakshmi 2000:) ಯುಗಾದಿ ಹಬ್ಬ ಸಂಭ್ರಮದಲ್ಲಿರುವ ರಾಜ್ಯದ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 27ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಹಬ್ಬದ ಖರ್ಚಿಗೆ ಆಸರೆಯಾದಂತಾಗಿದೆ.


ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಈ ಬಾರಿ ಬಾಕಿ ಇದ್ದ ಮೂರು ಕಂತುಗಳ ಹಣ ಒಟ್ಟಾಗಿ ಬಿಡುಗಡೆಯಾಗಿದ್ದು, ಅರ್ಹ ಮಹಿಳೆಯರ ಖಾತೆಗೆ ತಲಾ 6,000 ರೂ. ಜಮೆಯಾಗುತ್ತಿದೆ. ಈಗಾಗಲೇ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಗದಗ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಗೃಹ ಲಕ್ಷ್ಮೀ ಹಣ ಬಿಡುಗಡೆ ಆಗಿದೆ. ಉಳಿದ ಜಿಲ್ಲೆಗಳ ಫಲಾನುಭವಿಗಳಿಗೆ ಮುಂದಿನ 3 ದಿನಗಳ ಒಳಗಾಗಿ ಹಣ ತಲುಪಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚುರುಕಿನ ಕ್ರಮ ಕೈಗೊಂಡಿದೆ.


ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಯುಗಾದಿ ಹಬ್ಬದ ಬೆನ್ನಲ್ಲೇ ರಂಜಾನ್ ಕೂಡ ಇರುವುದರಿಂದ, ಈ ಹಣ ಬಿಡುಗಡೆಯು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ದೊಡ್ಡ ಮಟ್ಟದ ನೆರವು ನೀಡಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಕಂತುಗಳು ಈಗ ಒಟ್ಟಾಗಿ ಬಂದಿರುವುದು ಗೃಹಿಣಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Gruhalakshmi 2000: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
Gruhalakshmi 2000: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi 2000:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ