Gruhalakshmi 2026: ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್

Gruhalakshmi 2026: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಮನೆಯೊಡತಿಯರಿಗೆ ಪ್ರತಿ ತಿಂಗಳು ₹2,000 ನೇರ ನಗದು ವರ್ಗಾವಣೆ (DBT) ಮೂಲಕ ಆರ್ಥಿಕ ನೆರವು ನೀಡುತ್ತದೆ. ಇದು 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು ಬಿಪಿಎಲ್ (BPL)ಎಪಿಎಲ್ (APL) ಪಡಿತರ ಚೀಟಿ ಹೊಂದಿರುವ ಆದಾಯ ತೆರಿಗೆ/GST ಪಾವತಿಸದ ಅರ್ಹ ಮಹಿಳೆಯರಿಗೆ ನೆರವಾಗುತ್ತಿದೆ. ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆಯ ಮೂಲ ಉದ್ದೇಶವನ್ನು ಹೊಂದಿದ್ದು, 27 ಕಂತಿನ ಹಣ ಬಿಡುಗಡೆಯಾಗಲಿದೆ.

ಗೃಹಲಕ್ಷ್ಮಿ ಯೋಜನೆಯ 26ನೇ ಕಂತಿನ ಎರಡು ಸಾವಿರ ರೂಪಾಯಿ ಹಣ ಪಲಾನುಭವಿಗಳ ಖಾತೆಗೆ ಜಮಾ ಆಗಿದೆ. ಈಗ 27 ಕಂತಿನ ಹಣ ಜಮಾ ಪ್ರಕ್ರಿಯೆ ಪ್ರಾರಂಭಗೊಂಡಿದೆ. ನೇರವಾಗಿ ಮಹಿಳೆಯ ಖಾತೆಗೆ ಹಣ ಜಮೆ ಆಗುತ್ತದೆ. ಸತತವಾಗಿ ಗೃಹಲಕ್ಷ್ಮಿ ಹಣ ಬಿಡುಗಡೆಗೊಳ್ಳುತ್ತಿದ್ದು, ಐದು ಗ್ಯಾರಂಟಿ ಯೋಜನೆಗಳು ಯಶಸ್ಸಿನ ಹಾದಿಯಲ್ಲಿ ಸಾಗಿವೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ಪ್ರತಿ ಮನೆ ಯಜಮಾನಿಗೆ ಒಟ್ಟು 52 ಸಾವಿರ ರೂಪಾಯಿ ಪಾವತಿಯಾದಂತಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ 1.20 ಲಕ್ಷ ಕೋಟಿ ರೂ. ಹಣ ಜನರಿಗೆ ವರ್ಗಾಯಿಸಿದೆ. ಗೃಹಲಕ್ಷ್ಮಿ ಯೋಜನೆಗೆ 62,345 ಕೋಟಿ ರೂ. ವೆಚ್ಚ ಮಾಡಲಾಗಿದೆ. 27ನೇ ಕಂತಿನ ಅನುದಾನ ಕೂಡ ಖಜಾನೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ 31 ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

31 ಜಿಲ್ಲೆಗಳಲ್ಲಿನ ಫಲಾನುಭವಿಗಳಿಗೆ ಈ ಯೋಜನೆಯನ್ನು ತಲುಪಿಸುವ ನಿಟ್ಟಿನಲ್ಲಿ 27ನೇ ಕಂತಿನ ಅನುದಾನ ಹಣ ಕೂಡ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಇದೊಂದು ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆ ಮಾಡುವ ಗುರಿ ಹೊಂದಿದೆ.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಇತ್ತೀಚಿನ ಅಪ್ಡೇಟ್: ಮೃತಪಟ್ಟ ಫಲಾನುಭವಿಗಳಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದ್ದು ಸರ್ಕಾರ ಅಂತಹ ಹಣವನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳುತ್ತಿದೆ.

Gruhalakshmi 2026: ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್
Gruhalakshmi 2026: ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi 2026:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ