Gruhalakshmi 25 : 2 ತಿಂಗಳ ಬಾಕಿ ಹಣ ಬಿಡುಗಡೆಯ ಮಾಹಿತಿ

Gruhalakshmi 25 :ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಇನ್ನು 2 ತಿಂಗಳ ಬಾಕಿ ಹಣ ಬಿಡುಗಡೆ ವರ್ಗಾವಣೆ ಅಗಿಲ್ಲದಿರುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಈಗ ಎಚ್ಚೆತ್ತುಗೊಂಡಿರುವ ರಾಜ್ಯ ಸರ್ಕಾರವು ತ್ವರಿತ ಬಾಕಿ ಹಣ ಬಿಡುಗಡೆಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗಿದೆ. ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹಂಚಿಕೊಂಡಿರುವ ನೂತನ ಪತ್ರಿಕಾ ಪ್ರಕಟಣೆ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಗೃಹಲಕ್ಷ್ಮಿ ಯೋಜನೆಯ ಶುರುವಾದ ವೇಳೆಯಲ್ಲಿ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸರಿಯಾಗಿ ಫಲಾನುಭವಿಗೆ ನೇರ ನಗದು ವರ್ಗಾವಣೆ ಮೂಲಕ ರೂ 2,000/- ಆರ್ಥಿಕ ನೆರವು ಬ್ಯಾಂಕ್ ಖಾತೆಗೆ ವರ್ಗಾವಣೆ ಅಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಸಮರ್ಪಕವಾದ ಯೋಜನೆಯ ಹಣ ಜಮಾ ಅಗುತ್ತಿಲ್ಲ ಎನ್ನುವ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸೂಕ್ತ ಪರಿಹಾರ ಕ್ರಮವನ್ನು ಅನುಸರಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಬಗ್ಗೆ ಮತ್ತು ರದ್ದಾದ ರೇಷನ್ ಕಾರ್ಡದಾರರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಹಾಗೂ ಗೃಹಲಕ್ಷ್ಮಿ ಸಂಘದ ಮೂಲಕ ಮಹಿಳೆಯರು ಪಡೆಯಬಹುದಾದ ಸೌಲಭ್ಯದ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿ ಹಂಚಿಕೊಳ್ಳಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ರೂ 2,000/- ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ 2025 ನೇ ವರ್ಷದಲ್ಲಿ ಒಟ್ಟು 2 ತಿಂಗಳ ಹಣವನ್ನು ವರ್ಗಾವಣೆ ಮಾಡುವುದು ರಾಜ್ಯ ಸರ್ಕಾರದಿಂದ ಬಾಕಿ ಉಳಿದಿದ್ದು, ಆರ್ಥಿಕ ನೆರವು ವರ್ಗಾವಣೆ ಯಾವಾದ ಆಗಲಿದೆ ಎನ್ನುವ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹಂಚಿಕೊಂಡಿರುವ ಉತ್ತರ ಹೀಗಿದೆ ಫೆಬ್ರವರಿ ಮತ್ತು ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

ಗೃಹಲಕ್ಷ್ಮಿ ಯೋಜನೆಯ ಬಾಕಿಯಿರುವ ಎರಡು ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ಈಗಾಗಲೇ ಅನುಮೋದನೆಯನ್ನು ಪಡೆಯಲು ಅಗತ್ಯವಿವರವನ್ನು ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ದೊರೆಯಲ್ಲಿದ್ದು ಅನುಮೋದನೆ ಸಿಕ್ಕ ತಕ್ಷಣ ಎಲ್ಲಾ ಅರ್ಹ ಫಲಾನುಭವಿಗಳಿಗೆ ಬಾಕಿ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದಾರೆ.
ಅನರ್ಹ ರೇಷನ್‌ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಅವಲಂಬಿಸಿ ನಾವು ಗೃಹಲಕ್ಷ್ಮಿ ‌ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ನಿಂತಿರಬಹುದು. ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಕಡ್ಡಾಯಗಳನ್ನ ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು.

Gruhalakshmi 25 :  2 ತಿಂಗಳ ಬಾಕಿ ಹಣ ಬಿಡುಗಡೆಯ ಮಾಹಿತಿ
Gruhalakshmi 25 : 2 ತಿಂಗಳ ಬಾಕಿ ಹಣ ಬಿಡುಗಡೆಯ ಮಾಹಿತಿ

ಅರ್ಹತೆ:
* ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಿರುವ ಮಹಿಳೆಯರು ಮಾತ್ರ ಸದಸ್ಯರಾಗಬಹುದು.
* ಸದಸ್ಯತ್ವ ಪಡೆದ ನಂತರ ಪ್ರತಿ ತಿಂಗಳು ಕನಿಷ್ಠ ₹200 ಜಮಾ ಮಾಡಬೇಕು.
* ಸತತ 6 ತಿಂಗಳು ಉಳಿತಾಯ ಮಾಡಿದ ನಂತರ ₹30,000 ರಿಂದ ₹3 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಾಗುತ್ತೀರಿ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi 25)

  1. ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ