Gruhalakshmi and Gruhajyoti: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್

(Gruhalakshmi and Gruhajyoti:) ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಉಚಿತ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮರು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡಲು ಸರ್ಕಾರ ಸಜ್ಜಾಗಿರುವ ಹಿನ್ನೆಲೆ, ಶೀಘ್ರದಲ್ಲೇ ಮರು ನೋಂದಣಿ (Re-verification) ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.

ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಚಾರದ ಕುರಿತು ಗಂಭೀರ ಚರ್ಚೆ ನಡೆದಿದ್ದು, ಯೋಜನೆಗಳ ಸೌಲಭ್ಯ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಪಟ್ಟಿಯನ್ನು ಫಿಲ್ಟರ್ ಮಾಡಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಈ ಪ್ರಕ್ರಿಯೆ ಪ್ರಾಥಮಿಕ ಹಂತದಲ್ಲಿದ್ದು, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ವರದಿ ಸಿದ್ಧಪಡಿಸುತ್ತಿದ್ದಾರೆ. ಬಳಿಕ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಯೋಜನೆಗಳ ಹಣ ದುರುಪಯೋಗವಾಗದಂತೆ ತಡೆಯುವುದು ಹಾಗೂ ಸರ್ಕಾರದ ಆರ್ಥಿಕ ಹೊರೆ ನಿಯಂತ್ರಿಸುವುದು ಇದರ ಮುಖ್ಯ ಉದ್ದೇಶ ಎನ್ನಲಾಗಿದೆ.

ಇದೀಗ ಬಿಡುಗಡೆಯಾದ ಅಂಕಿ-ಅಂಶಗಳ ಪ್ರಕಾರ, ‘ಗೃಹಲಕ್ಷ್ಮಿ’ ಯೋಜನೆಯಡಿ ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ನೇರ ಹಣ ವರ್ಗಾವಣೆ (DBT) ಮೂಲಕ ಸುಮಾರು 69,783 ಕೋಟಿ ರೂ. ಜಮೆ ಮಾಡಲಾಗಿದೆ.

ಇನ್ನೊಂದೆಡೆ, ‘ಗೃಹಜ್ಯೋತಿ’ ಯೋಜನೆಯಡಿ ಏಪ್ರಿಲ್ ಅಂತ್ಯದವರೆಗೆ 1.64 ಕೋಟಿ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆದಿದ್ದು, ಇದಕ್ಕಾಗಿ ಸರ್ಕಾರ 26,115 ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಿದೆ.

Gruhalakshmi and Gruhajyoti: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್
Gruhalakshmi and Gruhajyoti: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Gruhalakshmi and Gruhajyoti:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?