Gruhalakshmi Sangha: ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ

(Gruhalakshmi Sangha) ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಹಾಗಾದರೆ ಏನದು ಸಿಹಿಸುದ್ದಿ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದು. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಈ ಹಿಂದೆ ಎಸ್‌. ಎಂ. ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ.


ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ


ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.


ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಮಹಿಳೆಯರು ಕಾಲಿಡದ ಕ್ಷೇತ್ರವಿಲ್ಲ, ಸಾಧನೆ ಮಾಡದ ವಿಷಯವಿಲ್ಲ, ಅಡುಗೆ ಮನೆಯಿಂದ ಚಂದ್ರಯಾನದವರೆಗೆ ಪ್ರತಿಯೊಂದರಲ್ಲೂ ನಾವು ಸಿದ್ದಹಸ್ತರು ಎನ್ನುವುದನ್ನು ಜಗತ್ತಿಗೆ ತೋರಿಸಿದ್ದೇವೆ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ, ಸ್ತ್ರೀ ಶಕ್ತಿ ಸಂಘಗಳ ಪಾತ್ರ ಈಗ ದೊಡ್ಡದಿದೆ. ಹೀಗಾಗಿ ಶೀಘ್ರವೇ ಗೃಹಲಕ್ಷ್ಮಿ ಸಂಘ ಸ್ಥಾಫನೆ ಮಾಡಲಾಗುವುದು ಎಂದರು.

Gruhalakshmi Sangha: ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ
Gruhalakshmi Sangha: ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ

ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು