ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮೊಬೈಲ್ ನಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋಗಳನ್ನಿಟ್ಟುಕೊಂಡು ಬ್ಲಾಕ್ ಮೈಲ್ ಮಾಡುತ್ತಿದ್ದ ಯುವಕನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-II ನ್ಯಾಯಾಲಯ ಒಂದು ವರ್ಷ ಕಠಿಣವಾಸ 3,01,000 ರೂ ದಂಡವಿಧಿಸಿ ತೀರ್ಪು ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
2019 ನೇ ಸಾಲಿನಲ್ಲಿ ಶಿವಮೊಗ್ಗ ನಗರದ 24 ವರ್ಷದ ಯುವಕನೊಬ್ಬನು, ತನ್ನ ಮೊಬೈಲ್ ನಲ್ಲಿ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಅಶ್ಲೀಲ ಫೊಟೋಗಳನ್ನು ತೆಗೆದು, ಆಕೆಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಪಿಐ ಅಭಯ್ ಪ್ರಕಾಶ್ ಸೋಮನಾಳ್, ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
- ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 425 ಮದ್ಯದ ಬಾಕ್ಸ್ ವಶ
- ಭದ್ರ ನದಿಯ ಆಳ ಕೇಳುತ್ತಿದ್ದ ವೃದ್ದೆ ನಾಪತ್ತೆ
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ The ADDI District and sessions court, FTSC_||(POCSO) shimogga ನ್ಯಾಯಾಲಯವು ದಂಡ ವಿದಿಸಿ ತೀರ್ಪು ನೀಡಿದೆ.
ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ “ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ”
ಜಯಪುರ/ಹರಿಹರಪುರ: ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದಲ್ಲಿ ಮೇ 4ರ ಗುರವಾರದಂದು ಶ್ರೀ ಲಕ್ಷ್ಮೀನರಸಿಂಹ ಜಯಂತಿ ಮಹೋತ್ಸವ ನಡೆಯಲಿದೆ.
ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಬೆಳಗ್ಗೆ 9 ಕ್ಕೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಗೆ ಕಲ್ಪೋಕ್ತ ಪೂಜೆ, ಲಕ್ಷ ತುಳಸಿ ಅರ್ಚನೆ ಹಾಗೂ ಶ್ರೀ ಲಕ್ಷ್ಮೀನರಸಿಂಹ ಸಹಸ್ರನಾಮ ಪಾರಾಯಣ ನಡೆಯಲಿದೆ. 11.30ಕ್ಕೆ ಪರಮಪೂಜ್ಯ ಜಗಧ್ಗುರುಗಳಾದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಚನ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಚೇರ್ಮನ್ ಮಹಬಲೇಶ್ವರ ಭಟ್, ಸಾಮಾಜಿಕ ಕಾರ್ಯಕರ್ತರಾದ ದೇವಾನಂದ್ ಹಾಗೂ ಶ್ರೀ ಮಠದ ಭಕ್ತರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ; 15 ಮಂದಿಗೆ ಗಾಯ
ಸಂಜೆ 5ಕ್ಕೆ ಕಲ್ಯಾಣೋತ್ಸವ 7ಕ್ಕೆ ರಥೋತ್ಸವ, ರಾತ್ರಿ 8ಕ್ಕೆ ಬೈಂದೂರಿನ ಧಾರೇಶ್ವರ ಯಕ್ಷ ಚಾರಿಟೇಬಲ್ ಟ್ರಸ್ಟ್ ನ ಕಲಾವಿದರಿಂದ ” ರಾವಣ ಮೋಕ್ಷ” ಎಂಬ ಯಕ್ಷಗಾನ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.