ಮೈಸೂರು/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕು ಮೀನಾಕ್ಷಿಪುರ ಗ್ರಾಮದ ಸಮೀಪ ಇರುವ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ದುರ್ದೈವಿಗಳು.
ಇದನ್ನೂ ಓದಿ; ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶದ ಠಾಣೆಗೆ ಹೈಟೆಕ್ ರೂಪ ಕೊಟ್ಟ ಪಿ.ಎಸ್.ಐ ಪವನ್
ಇದನ್ನೂ ಓದಿ; ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ
ಇವರಿಬ್ಬರು ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರ ಜೊತೆ ಬೈಕ್‌ನಲ್ಲಿ ಬಂದಿದ್ದು ಕೆಆರ್‌ಎಸ್ ಹಿನ್ನೀರು ಪ್ರದೇಶದ ನೀರಿನಲ್ಲಿ ಇಬ್ಬರೂ ಈಜಲು ನೀರಿಗೆ ಇಳಿದಿದ್ದರು. ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಖಾಸಗಿ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ
- ಕೊಪ್ಪ ಹಾಗೂ ಶೃಂಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ
- ರಾಜ್ಯಕ್ಕೆ ಮಾದರಿ ಪೊಲೀಸ್ ಸ್ಟೇಷನ್ ಬಗ್ಗೆ ಜನರ ಅಭಿಪ್ರಾಯ ಏನು?
ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನಾರ್ಧನ್ ರೆಡ್ಡಿಗೆ ಮತ್ತೊಂದು ಸಂಕಷ್ಟ; ಸಾವಿರಾರು ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಆದೇಶ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ಶೃಂಗೇರಿಗೆ ಬೇಟಿ ನೀಡಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನವನ್ನು ಪಡೆದರು.
ಇದನ್ನೂ ಓದಿ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ
ಜನಾರ್ದನ ರೆಡ್ಡಿಯ ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನದ ಅಂಗವಾಗಿ ಅಕ್ಷರಾಭ್ಯಾಸ ಮಾಡಿಸಿ, ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡರು.

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.
ಈ ಹಿಂದೆ ಕೂಡ 2023 ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.