HD Kumaraswamy: ಕುಮಾರಸ್ವಾಮಿ ವಿರುದ್ಧ FIR ದಾಖಲು

(HD Kumaraswamy) ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಎಡಿಜಿಪಿ ಎಂಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ಸಂಜಯ ನಗರ ಠಾಣೆಯಲ್ಲಿ ಕುಮಾರಸ್ವಾಮಿ ಸೇರಿದಂತೆ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!


ತಾನು ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿದ್ದೆ. ಈ ಹಿನ್ನೆಲೆಯಲ್ಲಿ ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದರು.


ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ತನ್ನನ್ನು ಕರ್ನಾಟಕ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕ ಬೆದರಿಕೆ ಹಾಕಿದ್ದಾರೆ ಹಾಗೂ ತಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್ ನಲ್ಲಿ ಮುಂದುವರೆಯುತ್ತಿರುವುದಾಗಿಯೂ ಆರೋಪ ಮಾಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದೂರಿನಲ್ಲಿ ಆರೋಪಿಸಿದ್ದರು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಈ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

HD Kumaraswamy: ಕುಮಾರಸ್ವಾಮಿ ವಿರುದ್ಧ FIR ದಾಖಲು
HD Kumaraswamy: ಕುಮಾರಸ್ವಾಮಿ ವಿರುದ್ಧ FIR ದಾಖಲು

ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!