ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ವೀರಭದ್ರ ಸಿಂಗ್ ಅವರು ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ವೀರಭದ್ರ ಸಿಂಗ್ ಅವರು ಗುರುವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ನಿಧನರಾದರು ಎಂದು ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯ ಹಿರಿಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನಕ್ ಅವರು ಸ್ಪಷ್ಟ ಪಡಿಸಿದರು.
ಇತ್ತೀಚೆಗಷ್ಟೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು, ನಂತರದ ದಿನಗಳಲ್ಲಿ ಚೇತರಿಸಿಕೊಂಡು ಮನೆಗೆ ಮರಳಿದ್ದರು.
87ವರ್ಷದ ವೀರಭದ್ರ ಸಿಂಗ್ ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು, ಮೊದಲ ಹಂತದಲ್ಲಿ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದರು, ಬುಧವಾರ ತೀವ್ರವಾದ ಉಸಿರಾಟದ ಸಮಸ್ಯೆ ಉಂಟಾಗಿದ್ದರಿಂದ ವೆಂಟಿಲೇಟರ್ ಬಳಸಿ ಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ ವೈದ್ಯರಿಗೂ ಸಹ ಚಿಕಿತ್ಸೆಯನ್ನು ಮುಂದುವರೆಸಲು ಆಗಲಿಲ್ಲ .ಒಂಬತ್ತು ಬಾರಿ ಶಾಸಕರಾಗಿ ಹಾಗೂ ಆರು ಬಾರಿ ಮುಖ್ಯಮಂತ್ರಿಯಾಗಿ ಜನ ಮನ್ನಣೆ ಪಡೆದಿದ್ದ ಸಿಂಗ್ ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.