Tuesday, November 28, 2023
Homeಸುದ್ದಿಗಳುದೇಶಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಭಾರತೀಯ ಸೇನಾ ಹೆಲಿಕಾಫ್ಟರ್ ಪತನ - ಓರ್ವ ...

ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಭಾರತೀಯ ಸೇನಾ ಹೆಲಿಕಾಫ್ಟರ್ ಪತನ – ಓರ್ವ ಯೋಧ ಹುತಾತ್ಮ

ಶ್ರೀನಗರ: ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಜಮ್ಮು, ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಎಚ್‌ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿoಗ್ ವೇಳೆ ಕಂಡು ಬಂದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲೆಟ್‌ಗಳಿದ್ದರು ಅದರಲ್ಲಿ ಓರ್ವ ಯೋಧ ಮೃತಪಟ್ಟು. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ.

ಪಠಾಣ್‌ಕೋಟ್‌ನಿಂದ ಬರುತ್ತಿದ್ದ ಹೆಲಿಕಾಪ್ಟರ್ ನ್ನು ಲಖನಪುರದಲ್ಲಿ ಲ್ಯಾಂಡಿoಗ್ ವೇಳೆ ಈ ಘಟನೆ ಸಂಭವಿಸಿದೆ. ಕೂಡಲೇ ಇಬ್ಬರು ಪೈಲೆಟ್‌ಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು ಆದರೂ ಯೋಧರೊಬ್ಬರು ಮೃತಪಟ್ಟು, ಇನ್ನೊಬ್ಬರು ತೀವ್ರ ಗಾಯಗಳಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Most Popular

Recent Comments