helpline centre: ಕೃಷಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ

(helpline centre) ಕೇಂದ್ರ ಸರ್ಕಾರ ರೈತರಿಗಾಗಿ ಇದೀಗ ಮತ್ತೊಂದು ಮಹತ್ವದ ಕ್ರಮಕ್ಕೆ ಸಜ್ಜಾಗಿದೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಹೌದು, ಮುಂಬರುವ ವರ್ಷದಲ್ಲಿ ರೈತರಿಗಾಗಿ ರಾಷ್ಟ್ರೀಯ ಸಹಾಯವಾಣಿ ಸೇವೆ ಆರಂಭಿಸುವ ಸಾಧ್ಯತೆ ಇದೆ. ದೆಹಲಿ ಎನ್​ಸಿಆರ್ ಪ್ರದೇಶದಲ್ಲಿ ಇದಕ್ಕಾಗಿ ಬೃಹತ್ ಕಾಲ್ ಸೆಂಟರ್ ಸ್ಥಾಪನೆಯಾಗಲಿದೆ. ಇದು ಟೋಲ್ ಫ್ರೀ ಹೆಲ್ಪ್​ ಲೈನ್ ಆಗಿರಲಿದ್ದು, ದೇಶದ ಯಾವುದೇ ಮೂಲೆಯಿಂದಲಾದರೂ ಹೆಲ್ಪ್ ​ಲೈನ್ ​ಗೆ ಬರುವ ರೈತರ ಕರೆಗಳಿಗೆ ದಿನದ 24 ಗಂಟೆಯೂ ಸ್ಪಂದನೆ ಸಿಗಲಿದೆ ಎನ್ನಲಾಗಿದೆ.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


ಶಿವರಾಜ್ ಸಿಂಗ್ ಚೌಹಾಣ್ ಅವರ ಮಹತ್ವಾಕಾಂಕ್ಷಿ ಐಡಿಯಾ:
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಕೃಷಿ ಸಚಿವರೂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರ ಮಹತ್ವಾಕಾಂಕ್ಷಿ ಐಡಿಯಾ ಇದಾಗಿದೆ. ಕೃಷಿ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ, ಹಾಗೂ ಈ ಯೋಜನೆಗಳಲ್ಲಿ ರೈತರಿಗೆ ಏನಾದರೂ ಸಮಸ್ಯೆಗಳಿದ್ದಲ್ಲಿ ಅದನ್ನು ಪರಿಹರಿಸಲು ಸಹಾಯವಾಣಿ ರೂಪಿಸಲಾಗಿದೆ. ಇಡೀ ದೇಶಕ್ಕೆ ಒಂದೇ ಸಹಾಯವಾಣಿ ಸಂಖ್ಯೆ ಇರುತ್ತದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ರೈತರ ಈ ಸಹಾಯವಾಣಿಯ ಸಂಖ್ಯೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. 100 ಸೀಟರ್​ ಗಳ ಕಾಲ್ ಸೆಂಟರ್ ಸ್ಥಾಪನೆಯಾಗಲಿದ್ದು, ವಾರದ ಏಳೂ ದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಹಾಯವಾಣಿ ಚಾಲನೆಯಲ್ಲಿರುತ್ತದೆ. ದೇಶದ ಯಾವುದೇ ಮೂಲೆಯಿಂದಲಾದರೂ ಲ್ಯಾಂಡ್​ ಲೈನ್ ಮತ್ತು ಮೊಬೈಲ್ ನಂಬರ್​ ಗಳಿಂದ ಇದಕ್ಕೆ ಕರೆ ಮಾಡಬಹುದು. ಕನ್ನಡವೂ ಸೇರಿದಂತೆ 22 ಭಾಷೆಗಳಲ್ಲಿ ಸೇವೆ ಇರಲಿದೆ ಎನ್ನಲಾಗಿದೆ.

helpline centre: ಕೃಷಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ
helpline centre: ಕೃಷಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ

ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು