ಬೆಂಗಳೂರು : ಕನ್ನಡದ ಹೆಮ್ಮೆಯ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಹೃದಯಾಘಾತದಿಂದ ಚಿಕೆತ್ಸೆಗೆ ಸ್ಪಂದಿಸದೆ ಇಂದು ಮರಣ ಹೊಂದಿದ್ದಾರೆ.
ಪುನೀತ್ ರಾಜಕುಮಾರ್ ರವರ ಇಂದು ಮುಂಜಾನೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಲಘು ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ತಕ್ಷಣವೇ ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಅವರನ್ನು ತಮ್ಮ ಶಕ್ತಿಮೀರಿ ಉಳಿಸುತ್ತೇವೆ ಎಂದು ಅಶ್ವಾಸನೆ ನೀಡಿದ್ದರು. ವೈದ್ಯರು ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ನಡೆಸಲಾದರೂ ಸಹ ಚಿಕಿತ್ಸೆಗೆ ಸ್ಪಂದಿಸದೆ ಪುನೀತ್ ರಾಜ್ ಕುಮಾರ್ ಇಂದು ರಾಜ್ ಕುಟುಂಬ ಮತ್ತು ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ್ದಾರೆ.