HESCOM Recruitment: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ

HESCOM Recruitment: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) 388 ITI ಎಲೆಕ್ಟ್ರಿಷಿಯನ್ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುಬ್ಬಳ್ಳಿಯಲ್ಲಿ ಸರ್ಕಾರಿ ಉದ್ಯೋಗ ಬಯಸುವ ಐಟಿಐ ಎಲೆಕ್ಟ್ರಿಷಿಯನ್ ಪದವೀಧರರಿಗೆ ಇದೊಂದು ಉತ್ತಮ ಅವಕಾಶ. ಮಾಸಿಕ 9600 ರೂ. ಸ್ಟೈಫಂಡ್‌ನೊಂದಿಗೆ ಪ್ರಾಯೋಗಿಕ ಅನುಭವ ಪಡೆಯಬಹುದು. ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಆಸಕ್ತರು ಮಾರ್ಚ್ 9ರೊಳಗೆ ಅರ್ಜಿ ಸಲ್ಲಿಸಿ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 2026ನೇ ಸಾಲಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತರಬೇತಿ ಆಧಾರಿತ ಉದ್ಯೋಗವಕಾಶವಿದ್ದು, ಒಟ್ಟು 388ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ.


ಇದನ್ನೂ ಓದಿ: ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ


ಹೆಸ್ಕಾಂ ಹುದ್ದೆಯ ಪ್ರಮುಖ ವಿವರ:
ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ )
ಹುದ್ದೆಗಳ ಸಂಖ್ಯೆ: 388
ಉದ್ಯೋಗ ಸ್ಥಳ: ಹುಬ್ಬಳ್ಳಿ
ಹುದ್ದೆಯ ಹೆಸರು: ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್)
ಸ್ಟೈಫಂಡ್: ತಿಂಗಳಿಗೆ ರೂ. 9600/-

ಅರ್ಹತೆಗಳು:
* ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ (ಎಲೆಕ್ಟ್ರಿಷಿಯನ್) ಕೋರ್ಸ್ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ.
* SC/ST ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ಬೇಡಿಕೆ ಕರಡು ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:
* ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ
* ಮೆರಿಟ್ ಲಿಸ್ಟ್ ಆಧಾರರಿತ
* ದಾಖಲೆ ಪರಿಶೀಲನೆ


ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ


ಅರ್ಹತೆಯನ್ನು ಖಚಿತಪಡಿಸಿಕೊಂಡು ಅಗತ್ಯ ದಾಖಲೆಗಳು, ಪ್ರಮಾಣಪತ್ರಗಳು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಸಿದ್ಧವಾಗಿರಬೇಕು. ಆನ್‌ಲೈನ್‌ ಅರ್ಜಿ ನಮೂನೆಗೆ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ಕೊನೆಗೆ ಅರ್ಜಿಯನ್ನು ಸಲ್ಲಿಸಬೇಕು.

ಸರ್ಕಾರಿ ವಲಯದಲ್ಲಿ ಸರ್ಕಾರಿ ವಿದ್ಯುತ್ ವಲಯದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಇದು ಉತ್ತಮ ಅವಕಾಶವಾಗಿದೆ. ಹೆಸ್ಕಾಂ ಈ ನೇಮಕಾತಿ ಒಳ್ಳೆಯ ಅವಕಾಶವಾಗಿದೆ. ಸಮಯ ವ್ಯರ್ಥ ಮಾಡದೇ ಅರ್ಜಿ ಸಲ್ಲಿಸಿ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್‌ 9ರೊಳಗೆ ಅರ್ಜಿ ಸಲ್ಲಿಸಬೇಕು.

HESCOM Recruitment: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ
HESCOM Recruitment: ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (HESCOM Recruitment:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ