(High court;) ಅಪಘಾತಕ್ಕೊಳಗಾದ ವಾಹನಕ್ಕೆ ಪರವಾನಗಿ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ
ಹೌದು, ಹೊಸಕೋಟೆ-ಚಿಕ್ಕತಿರುಪತಿ ಮಾರ್ಗದಲ್ಲಿ ಕೆಲಸದಿಂದ ಬೈಸಿಕಲ್ ನಲ್ಲಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಂದೀಶಪ್ಪ ಎಂಬುವರಿಗೆ ಸರಕು ವಾಹನವೊಂದು ಡಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ತೀವ್ರತರದ ಪೆಟ್ಟಾಗಿದ್ದು, ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ 13.44 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿತ್ತು. ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ನಂದೀಶಪ್ಪ ಪತ್ನಿ ಮತ್ತು ನ್ಯಾಯಾಧಿಕರಣದ ಆದೇಶ ರದ್ದು ಕೋರಿ ವಿಮಾ ಕಂಪನಿಗಳು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ
(High court;) ವಾಹನ ಮಾಲೀಕರು ತನ್ನ ವಾಹನವನ್ನು ರಸ್ತೆಗಿಳಿಸುವ ವೇಳೆ ಪರವಾನಧಿಗಿ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿಲ್ಲ. ಇದು ವಾಹನ ಮಾಲೀಕರ ಮೂಲಭೂತ ಉಲ್ಲಂಘನೆಯಾಗಿದೆ. ಇಲ್ಲಿ ವಾಹನ ಮಾಲೀಕರ ತಪ್ಪೂ ಇದೆ. ಹಾಗಾಗಿ, ವಿಮಾ ಕಂಪನಿಗಳ ಸಂಪೂರ್ಣ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ಮಾಲೀಕರೇ ಪಾವತಿ ಮಾಡಬೇಕು ಎಂಬ ವಿಮಾ ಕಂಪನಿಯ ವಾದವನ್ನು ನ್ಯಾಯಪೀಠ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನ ಪೂರ್ಣಪೀಠದ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಾಲಯ, ಧಿ ಸ್ವರ್ಣ ಸಿಂಗ್ ಮತ್ತು ಯಲ್ಲವ್ವ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹೇಳಿರುವಂತೆ ಇದೊಂದು ಮೂಲಭೂತ ಉಲ್ಲಂಘನೆಯಾಗಿದ್ದರೂ ವಿಮಾ ಕಂಪನಿ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದಕ್ಕೆ ಅವಕಾಶವಿರುವುದಿಲ್ಲ. ಎಂಟು ವಾರಗಳಲ್ಲಿ ವಿಮಾ ಕಂಪನಿ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗೆ ಪಾವತಿ ಮಾಡಬೇಕು, ಬಳಿಕ ವಾಹನ ಮಾಲೀಕರಿಂದ ವಸೂಲಿ ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ
ಎರಡೂ ಮೇಲ್ಮನವಿಗಳನ್ನು ಭಾಗಶಃ ಪುರಸ್ಕರಿಸಿದ ನ್ಯಾಯಪೀಠ, ಪರಿಹಾರ 13.44 ಲಕ್ಷ ರೂ.ಗಳನ್ನು 17.88 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿದ್ದು, ಶೇ. 9 ರಷ್ಟು ವಾರ್ಷಿಕ ಬಡ್ಡಿ ಸೇರಿಸಿ ಪಾವತಿ ಮಾಡಲು ಆದೇಶಿಸಿದೆ.

ಇದನ್ನೂ ಓದಿ; ವಸತಿ ರಹಿತರಿಗೆ ಗುಡ್ ನ್ಯೂಸ್; ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






