Saturday, June 10, 2023
Homeಆಧ್ಯಾತ್ಮಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಡಿ.6 ರಂದು ದೇಶದಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ: ರಾಜಶ್ರೀ...

ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಡಿ.6 ರಂದು ದೇಶದಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ: ರಾಜಶ್ರೀ ಚೌದರಿ

ಬೆಂಗಳೂರು: ದೇಶದಾದ್ಯಂತ ಹಿಂದೂಗಳ ಮೇಲೆ ನಡೆಯುತ್ತಿರುವಂತಹ ದೌರ್ಜನ್ಯವನ್ನು ಖಂಡಿಸಿ ಡಿ. 6 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಸುಭಾಷ್ ಚಂದ್ರಬೋಸ್ ಮೊಮ್ಮಗಳು, ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟೀಯ ಅಧ್ಯಕ್ಷರಾದ ರಾಜಶ್ರೀ ಚೌದರಿ ಹೇಳಿದರು.

ಪಟ್ಟಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ನಾನಾಕಡೆ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹೆಚ್ಚಾಗುತ್ತಿದ್ದು ಜಮ್ಮು- ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಇದರ ವಿರುದ್ಧ ಡಿ.6 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಹಮ್ಮಿಕೊಂಡಿದ್ದೇವೆ ಎಂದರು.

ಅಖಿಲ ಭಾರತ ಹಿಂದೂ ಮಹಾಸಭಾ ಸಂಘಟನೆ ಅನೇಕ ವರ್ಷಗಳಿಂದ ದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾದರು ಅವುಗಳ ವಿರುದ್ಧ ಎದ್ದು ನಿಂತು ಹೋರಾಟವನ್ನು ಮಾಡುತ್ತಿದೆ ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ವಿಚಾರಗಳು ಯಾವುದೇ ರೀತಿಯ ಸಮಸ್ಯೆ ಎದುರಾದರೂ ನಾವು ನ್ಯಾಯವನ್ನು ಒದಗಿಸಿ ಕೊಟ್ಟಿದ್ದೇವೆ ಎಂದರು.

ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮದವಾರ ಮೇಲೆ ಅನ್ಯಕೋಮಿನ ದುರುಳರು ದೌರ್ಜನ್ಯವನ್ನು ಎಸಗುತ್ತಿದ್ದಾರೆ ಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಪಂಡಿತರನ್ನು ಬಲಿಕೊಡಲಾಗುತ್ತಿದೆ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಹಿಂದೂ ದೇವಾಲಯಗಳ ನಾಶ ಆಗುತ್ತಿದೆ ಇವುಗಳ ವಿರುದ್ಧ ಕೇಂದ್ರ ಸರ್ಕಾರ ಸ್ವಲ್ಪ ಎಚ್ಚೆತ್ತು ಅದರ ಕಡೆ ಗಮನ ಹರಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷರಾದ ಡಿ. ವಿವೇಕಾನಂದ ಸ್ವಾಮಿ , ಕಾರ್ಯದರ್ಶಿ ಚೌಧರಿ ಹಾಗೂ ಹಿಂದೂ ಮಹಾಸಭಾ ಮುಖಂಡರಾದ ಕಠಾರಿ ಬಾಲಕೃಷ್ಣ ಗುರೂಜಿ ಮುಂತಾದವರು ಉಪಸ್ಥಿತರಿದ್ದರು.

Most Popular

Recent Comments