Thursday, April 18, 2024
Homeಸುದ್ದಿಗಳುಕ್ರೀಡೆಟೋಕಿಯೋ ಒಲಂಪಿಕ್ಸ್ : ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಭಾರತದಲ್ಲಿ ಇತಿಹಾಸ ಬರೆದ...

ಟೋಕಿಯೋ ಒಲಂಪಿಕ್ಸ್ : ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಭಾರತದಲ್ಲಿ ಇತಿಹಾಸ ಬರೆದ ಪುರುಷರ ಹಾಕಿ ತಂಡ

ಟೋಕಿಯೋ: ಬರೊಬ್ಬರಿ 4 ದಶಕಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದುಕೊಟ್ಟಿದೆ.

ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ ಹಾಕಿ ವಿಭಾಗದಲ್ಲಿ ಭಾರತ ಪದಕ ಗೆದ್ದ ಸಾಧನೆ ಮಾಡಿದ್ದು, ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿಯ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವನ್ನು ದಾಖಲಿಸಲು ನೆರವಾದರು. 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.

ಹಿoದೆ 1980ರ ಮಾಸ್ಕೋ ಒಲಿಂಪಿಕ್ಸ್ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು. ಈಗ 41 ವರ್ಷಗಳ ಬಳಿಕ ಮತ್ತೆ ಪದಕ ಗೆದ್ದು ಸಾಧನೆಯನ್ನು ಮಾಡಿದೆ.

 

Most Popular

Recent Comments