(Home Health Scheme:) ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದ್ದು, ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ
ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ:
ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನ ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನ ತರಲಾಗಿದೆ. ಆಶಾ ಕಾರ್ಯಕರ್ತರಯರಿಂದ ಹಿಡಿದು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಿ, ಸ್ಪಷ್ಟ ಮಾಹಿತಿಯುಳ್ಳ ಕೈಪಿಡಿ ನೀಡಿದ್ದೇವೆ. ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ ಕೂಡ ನಡೆಯಬೇಕು. ಆ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಯಾರು ಏನು ಮಾಡಬೇಕು ಎಂಬ ಸ್ಪಷ್ಟ ಚಿತ್ರಣವನ್ನ ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗಿದೆ.
(Home Health Scheme:) ವಿವಿಧ ರೋಗಗಳ ತಪಾಸಣೆ:
ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಉಚಿತವಾಗಿ ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಸಿಹಿಸುದ್ದಿ; ಜನಸೇವಕ ಮೂಲಕ ಮನೆಯಿಂದಲೇ ಇ-ಖಾತೆ ಪಡೆಯಲು ಅವಕಾಶ!
ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್ ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ.
(Home Health Scheme:) ಉಚಿತ ತಪಾಸಣೆ ಮತ್ತು ಔಷಧ ವಿತರಣೆ:
* ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ಅಲೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ (19-29 ವರ್ಷ ವಯಸ್ಸಿನವರಿಗೆ) ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAM) ಉಚಿತವಾಗಿ ನಡೆಸಲಾಗುವುದು.
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; 15,000 ಸಂಬಳ
* ರೋಗನಿರ್ಣಯವಾದ ನಂತರ, ವ್ಯಕ್ತಿಗಳು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Home Health Scheme:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





