Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ

Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್, ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

ಹುಕ್ಕಾ ಬಾರ್ ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್ (Hookah Bar: ) ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಕೋಳಿ ಅಂಕ ಕಡಿವಾಣಕ್ಕೆ ಸಜ್ಜು

ಕಳೆದ ವರ್ಷ ಕೋರಮಂಗಲದ ಹುಕ್ಕಾ ಬಾರ್‌ನಲ್ಲಿ ಅಗ್ನಿಶಾಮಕ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದ ಬೆಂಕಿ ಅವಘಡದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು, ಹುಕ್ಕಾ ಬಾರ್‌ಗಳು ಹರ್ಪಿಸ್, ಕ್ಷಯ, ಹೆಪಟೈಟಿಸ್ ಮತ್ತು ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಅಪಾಯ ಉಂಟುಮಾಡುತ್ತದೆ ಎಂದೂ ಉಲ್ಲೇಖಿಸಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಭಾರತ್ ಬ್ರ‍್ಯಾಂಡ್ ಅಕ್ಕಿ ಆರಂಭ; ವಾರದೊಳಗೆ ಜಿಲ್ಲೆಗಳಿಗೆ ಸೇವೆ ವಿಸ್ತರಣೆ

ಸರ್ಕಾರವು ತನ್ನ ಆದೇಶದಲ್ಲಿ, ಹುಕ್ಕಾ ಬಾರ್ ರಾಜ್ಯದಲ್ಲಿ ಅಗ್ನಿ ಅವಘಡವಗಳಿಗೆ ಕಾರಣವಾಗಿದೆ ಮತ್ತು ರಾಜ್ಯದ ಅಗ್ನಿ ನಿಯಂತ್ರಣ ಮತ್ತು ಅಗ್ನಿ ಸುರಕ್ಷತೆ ಕಾನೂನುಗಳನ್ನು ಉಲ್ಲಂಘಿಸುತ್ತವೆ. ಹೋಟೆಲ್‌ ಗಳು, ಬಾರ್‌ ಗಳು ಮತ್ತು ರೆಸ್ಟೋರೆಂಟ್‌ ಗಳಲ್ಲಿ ಹುಕ್ಕಾ ಸೇವನೆಯು ಆಹಾರ ಪದಾರ್ಥಗಳನ್ನು ಸಾರ್ವಜನಿಕ ಬಳಕೆಗೆ ಅಸುರಕ್ಷಿತವಾಗಿಸುತ್ತದೆ. ಇದು ಸಾರ್ವಜನಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದಿದೆ.

Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ
Hookah Bar: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ

ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಉದ್ಯೋಗಾವಕಾಶ; 214 ಹುದ್ದೆಗೆ ಅರ್ಜಿ ಆಹ್ವಾನ

ಹುಕ್ಕಾದಿಂದ ಸಾಂಕ್ರಾಮಿಕ ಕಾಯಿಲೆ ಹರಡುವಿಕೆ:
ಹುಕ್ಕಾವನ್ನು ಮೊಹರು ಮಾಡಿದ ಕಂಟೇನರ್‌ನಲ್ಲಿ ನಳಿಕೆ ಅಥವಾ ಪೈಪ್ ಸಾಧನದ ಮೂಲಕ ಮೌಖಿಕವಾಗಿ ಸೇವಿಸಲಾಗುತ್ತದೆ. ಹುಕ್ಕಾ ಸೇವನೆಯಿಂದ (Hookah Bar: ) ಹರ್ಪಿಸ್, ಕ್ಷಯ, ಹೆಪಟೈಟಿಸ್, ಕೋವಿಡ್ -19 ಮತ್ತು ಇತರ ಕಾಯಿಲೆಗಳಂತಹ ಸಾಂಕ್ರಾಮಿಕ ರೋಗಗಳು ಬಾಯಿಯ ಮೂಲಕ ಹರಡುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಇದನ್ನೂ ಓದಿ; ಮತ್ತೆ ಸಕ್ರಿಯಗೊಂಡ ನಕ್ಸಲ್ ಚಟುವಟಿಕೆ; ಶಸ್ತ್ರ ಹಿಡಿದ ನಕ್ಸಲರ ಬಗ್ಗೆ ಮಾಹಿತಿ ನೀಡಿದ ಗ್ರಾಮಸ್ಥರು; ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಕೆಂಪು ಉಗ್ರರ ಬೆದರಿಕೆ ಪತ್ರ

45 ನಿಮಿಷಗಳ ಕಾಲ ಹುಕ್ಕಾ ಸೇದುವುದು 100 ಸಿಗರೇಟ್ ಸೇದುವುದಕ್ಕೆ ಸಮ ಮತ್ತು ಆರೋಗ್ಯಕ್ಕೆ ಹಾನಿಕಾರಕ ಎಂದು ಸರ್ಕಾರವು ಅಧ್ಯಯನಗಳನ್ನು ಉಲ್ಲೇಖಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಹುಕ್ಕಾ ಒಂದು ವ್ಯಸನಕಾರಿ ವಸ್ತುವಾಗಿದ್ದು, ಇದು ಹೆಚ್ಚಿನ ಪ್ರಮಾಣದ ನಿಕೋಟಿನ್ ಅಥವಾ ತಂಬಾಕು ಮತ್ತು ಮೊಲಾಸಸ್ ಅಥವಾ ರಾಸಾಯನಿಕ ಕಾರ್ಬನ್ ಮಾನಾಕ್ಸೈಡ್ ಅನ್ನು ಹೊಂದಿರುವ ಸುವಾಸನೆ ಪದಾರ್ಥಗಳನ್ನು ಒಳಗೊಂಡಿರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ ಬುಧವಾರದಿಂದ ಜಾರಿಗೆ ಬರುವಂತೆ ಆರೋಗ್ಯ ಇಲಾಖೆಯು ತಕ್ಷಣದ ನಿಷೇಧವನ್ನು ಹೊರಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ