ಧಾರವಾಡ/ಹಾಸನ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ನಡೆದಿದೆ.
ಇದನ್ನೂ ಓದಿ; ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು
ಇದನ್ನೂ ಓದಿ; ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ಆತ ಯಾರು?
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಚಂದನ್ (28), ಹೊಳೆನರಸಿಪುರದ ಟಿ.ವಿ. ದೀಪು(26), ಹೊಳೆನರಸಿಪುರ ತಾಲೂಕಿನ ಒಡನಹಳ್ಳಿ ಗ್ರಾಮದ ಪುಟ್ಟಣ್ಣ ಮಡಿಕೇರಿ (33) ಮೃತ ದುರ್ದೈವಿಗಳು. ಹಾಗೂ ಇನ್ನೊಬ್ಬ ಗಾಯಾಳು ಕಿರಣ್ (28) ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು
- ಎರಡು ಬೈಕ್ ಗಳ ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ
- ಪ್ರವಾಸಿ ತಾಣದಲ್ಲಿ ಕಾಡು ಪ್ರಾಣಿಗಳ ಉಪಟಳ
ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ; ಸರ್ಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ, ಕಾಂಗ್ರೆಸ್ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ
ಜಯಪುರ: “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಜೂನ್ 11 ರ ಭಾನುವಾರ ಬೆಳಗ್ಗೆ 9:00 ನಡೆಸಲಾಗುವುದು ಎಂದು ಪತ್ರಿಕೆ ಹೇಳಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ
ನವಚೈತ್ರ ಸಾಂಸ್ಕೃತಿಕ ವೇದಿಕೆ ಕೊಪ್ಪ, ಮೇಗುಂದಾ ಹೋಬಳಿ ಪತ್ರಕರ್ತರು ಜಯಪುರ, ಗ್ರಾಮ ಪಂಚಾಯಿತಿ ಅಗಳಗಂಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗಳಗಂಡಿ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ಕೊಪ್ಪ ತಾಲೂಕು ಆರೋಗ್ಯ ಕೇಂದ್ರ, ಅಗಳಗಂಡಿ ಸಮುದಾಯ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಿಂದ “ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ” ಶಿಬಿರವನ್ನು ಆಯೋಜಿಸಲಾಗಿದೆ.
ಜೂನ್ 11 ರ ಭಾನುವಾರ (ನಾಳೆ) ಬೆಳಗ್ಗೆ 9:00 ರಿಂದ 1:00 ಗಂಟೆಯವರೆಗೆ ಅಗಳಗಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಕಿಬ್ಳಿ ಪ್ರಸನ್ನ ಕುಮಾರ್ ಪತ್ರಿಕಾ ಹೇಳಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಕಣ್ಣಿನ ಚಿಕಿತ್ಸೆಗೆ ಒಳಪಡುವ ರೋಗಿಗಳು ತಪಾಸಣಾ ದಿನದಂದೇ ಆಸ್ಪತ್ರೆಗೆ ಹೋಗಲು ಸಿದ್ದರಿದ್ದಲ್ಲಿ ಉಚಿತ ಸಾರಿಗೆ, ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುವುದು. ಶಸ್ತ್ರಚಿಕಿತ್ಸೆಯ ನಂತರ ಶಿಬಿರ ಸ್ಥಳಕ್ಕೆ ವಾಪಸು ಕರೆತಂದು ಬಿಡಲಾಗುತ್ತದೆಇನ್ನು ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್ ಅಥವಾ ಯಾವುದಾದರೂ ಭಾವಚಿತ್ರವಿರುವ ಗುರುತಿನ ಚೀಟಿ ತರತಕ್ಕದ್ದು. ಈ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಬಳಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ 7795144239 ಸಂಪರ್ಕಿಸಬಹುದು.
ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ