Monday, December 11, 2023
Homeಮಲೆನಾಡುಬೈಕ್ ವೀಲಿಂಗ್ ಹುಚ್ಚಾಟದಿಂದ ಭೀಕರ ಅಪಘಾತ; ಇಬ್ಬರು ಯುವತಿಯರಿಗೆ ಗಂಭೀರ ಗಾಯ

ಬೈಕ್ ವೀಲಿಂಗ್ ಹುಚ್ಚಾಟದಿಂದ ಭೀಕರ ಅಪಘಾತ; ಇಬ್ಬರು ಯುವತಿಯರಿಗೆ ಗಂಭೀರ ಗಾಯ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ವೀಲಿಂಗ್ ಹುಚ್ಚಾಟದಿಂದ ಭೀಕರ ಅಪಘಾತ ಸಂಭವಿಸಿದ್ದು, ಅಮಾಯಕ ಯುವತಿಯರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಾಲಗಾಮ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ನಡೆದಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ರಾತ್ರಿ ಸಾಲಗಾಮೆ ರಸ್ತೆಯ ಫುಡ್ ಕೋರ್ಟ್ ನಲ್ಲಿ ಊಟ ಮುಗಿಸಿಕೊಂಡು ಬೈಕ್ ಏರಿದ ಭೂಮಿಕಾ, ಸಿಂಚನ ಎಂಬ ಯುವತಿಯರು ಮನೆಗೆ ಮರಳುತ್ತಿದ್ದರು. ಈ ಸಂದರ್ಭ ನಿರ್ಲಕ್ಷ್ಯ ಹಾಗೂ ಅತಿವೇಗವಾಗಿ ವಿಲಿಂಗ್ ಮಾಡಿಕೊಂಡು ಬಂದ ಯುವಕರ ಬೈಕ್ ಯುವತಿಯರ ಬೈಕ್ ಗೆ ಡಿಕ್ಕಿ ಹೊಡೆದಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಯುವತಿಯರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಭೂಮಿಕಾ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವೀಲಿಂಗ್ ಮಾಡುತ್ತಿದ್ದ ಪುಂಡನನ್ನು ಶಾಕೀರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ.

ಇದನ್ನೂ ಓದಿ; ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟ ದುಷ್ಕರ್ಮಿಗಳು

ಜನನಿಬಿಡ ಪ್ರದೇಶದಲ್ಲಿ ವೀಲಿಂಗ್ ಮಾಡಿ ಯುವತಿಯರಿಗೆ ಜೀವಕ್ಕೆ ಮಾರಕರಾದ ಇಬ್ಬರನ್ನೂ ಸಾರ್ವಜನಿಕರು ಸ್ಥಳದಲ್ಲೇ ಹಿಡಿದು ಬಟ್ಟೆ ಕಳಚಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಾಕೀರ್ ಹಾಗೂ ಅಪ್ರಾಪ್ತ ವಯಸ್ಕನನ್ನು ಹಾಸನ ನಗರ ಪೊಲೀಸರು ವಶಕ್ಕೆ ಪಡೆದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟ ದುಷ್ಕರ್ಮಿಗಳು

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಾಂಸಕ್ಕಾಗಿ ದುಷ್ಕರ್ಮಿಗಳು ಎಮ್ಮೆಯೊಂದನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮದ ಎಬಿಸಿ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.

ಇದನ್ನೂ ಓದಿ; ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ

ದಯಾನಿಧಿ ಎಂಬ ರೈತರಿಗೆ ಸೇರಿದ್ದ ಎಮ್ಮೆಯನ್ನು ಕಾನೂನು ಬಾಹಿರವಾಗಿ ಹೊಂದಿದ್ದ ಡಬಲ್ ಬ್ಯಾರಲ್ ಗನ್‌ನಿಂದ ಹತ್ಯೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ (52) ಹಾಗೂ ಅಬ್ಯುಲ್ ಖಾದರ್ (67) ಎಂಬುವರನ್ನು ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಖ್ಯ ಆರೋಪಿ ಪರಾರಿಯಾಗಿದ್ದು, ಸದ್ಯ ಇಬ್ಬರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವಾತನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಾಸನ ಎಸ್‌ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Most Popular

Recent Comments