Hostels: ವಿದ್ಯಾರ್ಥಿ ನಿಲಯಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

(Hostels:) ವಿದ್ಯಾರ್ಥಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.


ನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ


(Hostels:) ಸುತ್ತೋಲೆಯಲ್ಲಿ ಏನಿದೆ?:
* ನಿಲಯ ಮೇಲ್ವಿಚಾರಕರು ವಿದ್ಯಾರ್ಥಿನಿಲಯಗಳಲ್ಲಿ ಅಳವಡಿಸಿರುವ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಸಿ.ಸಿ.ಟಿವಿ ಕ್ಯಾಮಾರ ಕೆಟ್ಟು ಹೋದ ಸಂದರ್ಭದಲ್ಲಿ ತಕ್ಷಣವೇ ದುರಸ್ತಿ ಮಾಡಿಸಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಪ್ರತಿ ತಿಂಗಳು ಸಿ.ಸಿ.ಟಿವಿ ವಿಡಿಯೋ ದೃಶ್ಯಗಳನ್ನು ಸಿ.ಡಿ. ಅಥವಾ ಪೆನ್ಡ್ರೈ ವ್ ನಲ್ಲಿ ಸಂಗ್ರಹಿಸಿಡಬೇಕು.
* ವಿದ್ಯಾರ್ಥಿನಿಲಯದ ದ್ವಾರದಲ್ಲಿ ಸಿಬ್ಬಂದಿ ಹಾಗೂ ರಿಜಿಸ್ಟರ್ ಇರಿಸಿ, ವಿದ್ಯಾರ್ಥಿಗಳು ಹೊರಗೆ ತೆರಳುವ ಹಾಗೂ ಒಳಗೆ ಬರುವ ಮುನ್ನ ಹೆಸರು, ಹೊಗುವ ಸಮಯ, ಸ್ಥಳ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕು.
* ವಿದ್ಯಾರ್ಥಿಗಳು ರಜೆ ಕೋರಿದ್ದಲ್ಲಿ ಪೋಷಕರಿಗೆ ಅಥವಾ ಪತ್ರದ ಮೂಲಕ ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳಿಂದ ರಜೆ ಅರ್ಜಿ ಪಡೆದು ಮಂಜೂರು ಮಾಡಬೇಕು.
* ವಿದ್ಯಾರ್ಥಿನಿಯರು ರಜೆ ಮೇಲೆ ತೆರಳಿದ ಸಂದರ್ಭದಲ್ಲಿ ಪೋಷಕರ ಮೋಬೈಲ್ ಸಂಖ್ಯೆಗೆ ವಿಡಿಯೋ ಕರೆ ಮಾಡಿ ಸುರಕ್ಷಿತವಾಗಿ ವಿದ್ಯಾರ್ಥಿನಿ ಮನೆ ತಲುಪಿದ ಕುರಿತು ಖಾತರಿ ಪಡಿಸಿಕೊಳ್ಳಬೇಕು.
* ಮುಖ್ಯವಾಗಿ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹತ್ತಿರ ಪೊಲೀಸ್ ಠಾಣೆಯಿಂದ ಬೀಟ್ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು.


ನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ;  4 ಲಕ್ಷ ಸಹಾಯಧನ


(Hostels:) * ವಿದ್ಯಾರ್ಥಿನಿಲಯದ ಮುಖ್ಯದ್ವಾರದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ, ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ನಿಲಯದ ಮೇಲ್ವಿಚಾರಕರು ದೂರು ನೀಡಬೇಕು.
* ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಕಡ್ಡಾಯವಾಗಿ ನಿಲಯದಲ್ಲಿ ಹಾಜರಿದ್ದು ವಿದ್ಯಾರ್ಥಿಗಳ ಚಲನಾ-ವಲನಾಗಳ ಮೇಲೆ ಗಮನ ಇರಿಸಿಬೇಕು.
* ರಾತ್ರಿ ಕಾವಲುಗಾರರು ಸಂಜೆ 5 ಗಂಟೆಗೆ ಕರ್ತವ್ಯಕ್ಕೆ ಹಾಜರಿಗಿ ಮಾರನೇ ದಿನ ಬೆಳಿಗ್ಗೆ 7 ಗಂಟೆಗೆ ಕರ್ತವ್ಯದಿಂದ ತೆರಳಬೇಕು.
* ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.
* ವಿದ್ಯಾರ್ಥಿ ನಿಲಯದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಸಧೃಡತೆ ಕುರಿತು ನುರಿತ ತಜ್ಞರಿಂದ ಅರಿವು ಮೂಡಿಸುವ ಕಾರ್ಯಗಾರ ಆಯೋಜಿಸಬೇಕು.
* ಕಾರ್ಯಗಾರದ ಛಾಯಾಚಿತ್ರಗಳೊಂದಿಗೆ ತಪ್ಪದೇ ರಿಜಿಸ್ಟರ್ನುಲ್ಲಿ ನಮೂದಿಸಬೇಕು.
* ಮಾನಸಿಕ ತಪಾಸಣೆ ವೇಳೆ ಒತ್ತಡ, ಖಿನ್ನತೆಗೊಳಗಾದ ವಿದ್ಯಾರ್ಥಿನಿಯರಿಗೆ ನುರಿತ ಸಮಾಲೋಚಕರಿಂದ ಚಿಕಿತ್ಸೆ ಕೊಡಿಸಬೇಕು.
* ಜಿ.ಪಂ.ಸಿಇಓ ಅವರು ನೀಡಿದ ಸುತ್ತೋಲೆಯನ್ನು ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ತಪ್ಪದೇ ಪಾಲನೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Hostels: ವಿದ್ಯಾರ್ಥಿ ನಿಲಯಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ
Hostels: ವಿದ್ಯಾರ್ಥಿ ನಿಲಯಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

ಇತ್ತೀಚಿನ ಜನಪ್ರಿಯ ಸುದ್ದಿಗಳು (Hostels:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ