House holders: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್

(House holders:) ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಶೀಘ್ರವೇ ರಾಜ್ಯ ಸರ್ಕಾರದಿಂದ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗುತ್ತಿದೆ. ಆ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ದೊರಕಿಸಿಕೊಡುವಂತ ಕೆಲಸ ಮಾಡಲಿದೆ.


ನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ‌ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದಿದ್ದಾರೆ.


ನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


(House holders:) ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ ಎಂದಿದ್ದಾರೆ.

House holders: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್
House holders: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (House holders:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ