Housing Subsidy: ಸ್ವಂತ ಮನೆ ನಿರ್ಮಾಣಕ್ಕೆ ರೂ 2 ಲಕ್ಷ ಸಹಾಯಧನ

Housing Subsidy:ರಾಜ್ಯ ಸರಕಾರದಿಂದ ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಗರಿಷ್ಠ ರೂ 2.0 ಲಕ್ಷ ಆರ್ಥಿಕ ನೆರವನ್ನುಒದಗಿಸುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.ಸ್ವಂತ ಮನೆಯನ್ನು ಕಟ್ಟಿಕೊಂಡು ಬದುಕಬೇಕೆಂಬ ಸುಮಾರು ಬಡ ಕುಟುಂಬಗಳ ಕನಸು ಈ ಯೋಜನೆ ಪೂರ್ಣಗೊಳಿಸುತ್ತಿದೆ. ಸರ್ಕಾರದ ಮೂಲ ಉದ್ದೇಶ ಆರ್ಥಿಕ ಸುಧಾರಿಣೆ ತರುವುದಾಗಿದೆ.

ನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಅರ್ಜಿ ಸಲ್ಲಿಕೆ ಎರಡು ರೀತಿ ವಿಭಜಿಸಬಹುದು ಒಂದು ಆನ್‌ಲೈನ್‌ ಮೂಲಕ ಹಾಕಬಹುದು ಇಲ್ಲವಾದಲ್ಲಿ ನಿಮ್ಮ ಹತ್ತಿರದ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳಾಗಿದ್ದರೆ,ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಅಧಿಕೃತ ವೆಬ್‌ಸೈಟ್‌ ಗೆ ಭೇಡಿ ನೀಡಿ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು. ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ಫಲಾನುಭವಿಗಳು 1.75 ಲಕ್ಷ ರೂ ಹಾಗೂ ನಗರ ವಾಸಿ ಫಲಾನುಭವಿಗಳಿಗೆ ರೂ 2.00 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ. ಮುಖ್ಯವಾಗಿ ಹಿಂದುಳಿದ ವರ್ಗಗಳು ಉದಾ:ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಈ ವರ್ಗಕ್ಕೆ ಸೇರಿದ ಜನರಿಗೆ ಮನೆ ಕಟ್ಟಿಕೊಡುವ ನಿಟ್ಟಿನಲ್ಲಿ ಈ ಯೋಜನೆ ಜಾರಿಯಾಗಿದೆ.ಪ್ರಧಾನ ಮಂತ್ರಿ ಆವಾಸ್‌ ಯೋಜನೆಡಿಯಲ್ಲಿ ಆರ್ಥಿಕ ನೆರವು ಪಡೆಯುವುದರ ಜೊತೆಗೆ ಹೆಚ್ಚುವರಿಯಾಗಿ 1.5 ಲಕ್ಷ ಆರ್ಥಿಕ ಸಹಾಯಧನ ಪಡೆಯಬಹುದು.

ಅರ್ಜಿ ಸಲ್ಲಿಸಲು ಅರ್ಹತೆಗಳು:
* ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಸ್ವಂತ ಮನೆಯನ್ನು ಹೊಂದಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾಗರಿಕರು ಅರ್ಜಿ ಸಲ್ಲಿಸಬಹುದು.
* ವಾರ್ಷಿಕ ಆದಾಯವು ಕಡಿಮೆ ಇದ್ದು, ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿರಬೇಕು.
* ಮನೆ ನಿರ್ಮಾಣಕ್ಕಾಗಿ ಖಾಲಿ ಜಾಗವನ್ನು ಹೊಂದಿರುವುದು ಕಡ್ಡಾಯ.
* ಈ ಹಿಂದೆ ಯಾವುದೆ ವಸತಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆದವರಾಗಿರಬಾರದು.

ನ್ನೂ ಓದಿ: ಆಧಾರ್‌ ಸೇವಾ ಕೇಂದ್ರದಲ್ಲಿ ಜಾಬ್‌, ಅರ್ಜಿ ಆಹ್ವಾನ

ಬೇಕಾಗುವ ಕಡ್ಡಾಯ ದಾಖಲೆಗಳು:
* ಆಧಾರ್ ಕಾರ್ಡ್(Aadhar card)
* ರೇಷನ್ ಕಾರ್ಡ್(BPL Card)
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste And Income Certificate)
* ಭೂ ದಾಖಲೆಗಳು (Land Document)
* ಬ್ಯಾಂಕ್ ಪಾಸ್ ಬುಕ್ (Bank Pass Book)
* ಪೋಟೋ(Photo)

Housing Subsidy: ಸ್ವಂತ ಮನೆ ನಿರ್ಮಾಣಕ್ಕೆ ರೂ 2 ಲಕ್ಷ ಸಹಾಯಧನ
Housing Subsidy: ಸ್ವಂತ ಮನೆ ನಿರ್ಮಾಣಕ್ಕೆ ರೂ 2 ಲಕ್ಷ ಸಹಾಯಧನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Housing Subsidy:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ