ಪ್ರಸ್ತುತ ದಿನಗಳಲ್ಲಿ ಸರ್ಕಾರದ ಯಾವುದೇ ಸೇವೆಗಳನ್ನು ಪಡೆಯುವುದಕ್ಕೂ ಆಧಾರ್ ಕಾರ್ಡ್ ಅವಶ್ಯಕತೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಹಲವಾರು ಸೇವೆಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಒಂದಾಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ. ಇನ್ನು ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು, ವಿಳಾಸ, ಫೋಟೋ, ಬಯೋಮೆಟ್ರಿಕ್ ವಿವರಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ, ವಯಸ್ಸು, ಲಿಂಗ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಸಂಬಂಧ ವಿಳಾಸವನ್ನು ಅಗತ್ಯವಿದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಇದರಲ್ಲಿ ಫೋಟೋವನ್ನು ಬದಲಾಯಿಸುವುದಕ್ಕೂ ಅವಕಾಶವಿದೆ.
ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು
ಹೌದು, ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿ ಸೇರಿದಂತೆ ಹಲವು ಅಗತ್ಯ ಬದಲಾವಣೆಗಳನ್ನು ಆಗಾಗ ಅಪ್ಡೇಟ್ ಮಾಡಬಹುದು. ನೀವು ಆಧಾರ್ ಕಾರ್ಡ್ ಪಡೆದುಕೊಂಡು ಬಹ ದಿನಗಳಾಗಿದ್ದು ನಿಮ್ಮ ಫೋಟೋ ಬದಲಾಯಿಸಬೇಕೆಂದರೆ ಅದಕ್ಕೂ ಅವಕಾಶವಿದೆ. ಇದಕ್ಕಾಗಿ ನೀವು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹಾಗಾದ್ರೆ ಆಧಾರ್ ಕಾರ್ಡ್ ನಲ್ಲಿ ಫೋಟೋವನ್ನು ಬದಲಾಯಿಸುವುದು ಹೇಗೆ ಅನ್ನೋದನ್ನ ತಿಳಿಸಿಕೊಡ್ತೀವಿ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಸ್ಕೂಟಿಯ ನಡುವೆ ಡಿಕ್ಕಿ
- ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್ ಇಲಾಖೆ ದಾಳಿ
- ನಿಮ್ಮ ಕ್ಷೇತ್ರದಿಂದ ಯಾವ ಯಾವ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ?
ನಿಮ್ಮ ಆಧಾರ್ ಕಾರ್ಡ್ ನಲ್ಲಿ ಫೋಟೋವನ್ನು ಅಪ್ಡೇಟ್ ಮಾಡುವುದಕ್ಕೆ ಆನ್‌ಲೈನ್‌ನಲ್ಲಿ ಅವಕಾಶವಿಲ್ಲ. ನಿಮ್ಮ ಫೋಟೋ ಬದಲಾಯಿಸಬೇಕಾದರೆ ನೀವು ನಿಮ್ಮ ಹತ್ತಿರದ ಆಧಾರ್ ನೋಂದಣಿ ಕೇಂದ್ರ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕಾಗುತ್ತದೆ. ಆದರೆ ನೋಂದಣಿ ಕೇಂದ್ರಕ್ಕೆ ಭೇಟಿ ನೀಡುವ ಮೊದಲು ನೀವು ಆನ್‌ಲೈನ್‌ನಲ್ಲಿ ಆಧಾರ್ ಫೋಟೋ ಬದಲಾವಣೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಅಪ್ಡೇಟ್ ಮಾಡಲು ನೀವು ಅನುಸರಿಸಬೇಕಾದ ಹಂತಗಳೇನು ಅನ್ನೋದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.
ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ
ಆಧಾರ್ ಕಾರ್ಡ್ ನಲ್ಲಿ ಫೋಟೋ ಬದಲಾಯಿಸುವುದು ಹೇಗೆ?
1. ಮೊದಲಿಗೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (UIDAI) ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಥವಾ https://uidai.gov.in/ ಲಿಂಕ್ ಅನ್ನು ಕ್ಲಿಕ್ ಮಾಡಿ
2. ನಂತರ ಆಧಾರ್ ವೆಬ್‌ಸೈಟ್‌ನಿಂದ ಆಧಾರ್ ನೋಂದಣಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ.
3. ಇದೀಗ ಫೋಟೋ ಬದಲಾವಣೆಗೆ ಸಂಬಂಧಿಸಿದ ಫಾರ್ಮ್ ನಲ್ಲಿ ಅಗತ್ಯವಿರುವ ಮಾಹಿತಿಯನ್ನು ತುಂಬಿರಿ.
4. ಅಗತ್ಯವಿರುವ ವಿವರ ಭರ್ತಿ ಮಾಡಿದ ನಂತರ ನೀವು ಹತ್ತಿರದ ಆಧಾರ್ ನೋಂದಣಿ ಕೇಂದ್ರದಲ್ಲಿ ಫಾರ್ಮ್ ಅನ್ನು ಸಲ್ಲಿಸಬೇಕಾಗುತ್ತದೆ.
5. ಇದಾದ ನಂತರ ಬಯೋಮೆಟ್ರಿಕ್ ಪರಿಶೀಲನೆಯ ಮೂಲಕ ನಿಮ್ಮ ವಿವರಗಳನ್ನು ದೃಡೀಕರಿಸುತ್ತಾರೆ.
6. ನಂತರ ನಿಮ್ಮ ಹೊಸ ಫೋಟೋವನ್ನು ಆಧಾರ್ ನೋಂದಣಿ ಕೇಂದ್ರದಲ್ಲಿ ತೆಗೆದುಕೊಳ್ಳಲಾಗುತ್ತದೆ.
7. ಫೋಟೋ ಬದಲಾವಣೆ ಸೇವೆಗಾಗಿ ನಿಮ್ಮಿಂದ 100 ರೂ ಶುಲ್ಕವನ್ನು ವಿಧಿಸಲಾಗುತ್ತದೆ.
8. ನಿಮ್ಮ ಫೋಟೋ ಬದಲಾವಣೆಯ ನಂತರ ಅಪ್‌ಡೇಟ್ ವಿನಂತಿ ಸಂಖ್ಯೆಯೊಂದಿಗೆ (URN) ಸ್ವೀಕೃತಿ ಚೀಟಿಯನ್ನು ಒದಗಿಸಲಾಗುತ್ತದೆ.
9. ಈ ಸಂಖ್ಯೆಯನ್ನು ಬಳಸಿ UIDAI ವೆಬ್‌ಸೈಟ್‌ನಲ್ಲಿ ನಿಮ್ಮ ಆಧಾರ್ ಅಪ್ಡೇಟ್ ಸ್ಟೆಟಸ್ ಅನ್ನು ಚೆಕ್ ಮಾಡಬಹುದಾಗಿದೆ. ನವೀಕರಣ ಸ್ಥಿತಿಯನ್ನು ಪರಿಶೀಲಿಸಲು ಈ URN ಅನ್ನು ಬಳಸಲಾಗುತ್ತದೆ.