(HSRP Installation) ವಾಹನ ಸವಾರರಿಗೆ ರಾಜ್ಯದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?
ಈ ಹಿಂದೆ ಎಲ್ಲಾ ಹಳೆಯ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆಗೆ ಜೂನ್ 12 ರ ವರೆಗೆ ಅವಕಾಶ ನೀಡಲಾಗಿತ್ತು. ನಂತರ ಜುಲೈ 4 ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಸೆ. 15 ರವರೆಗೆ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿಸುದ್ದಿ ನೀಡಿದೆ.
ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ
ಯಾವ ವಾಹನಗಳಿಗೆ ಕಡ್ಡಾಯ:
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ಇದನ್ನೂ ಓದಿ: ದೇಶದ 9.26 ಕೋಟಿ ರೈತರಿಗೆ ಗುಡ್ ನ್ಯೂಸ್!; ಪಿಎಂ ಕಿಸಾನ್ 17ನೇ ಕಂತಿನ ಹಣ ಇಂದು ಬಿಡುಗಡೆ
ಯಾವ ವಾಹನಗಳಿಗೆ ಎಷ್ಟು ದರ?
ಆಟೋ ಅಥವಾ ಮೂರು ಚಕ್ರದ ವಾಹನಗಳಿಗೆ 450 ರೂ.ಗಳಿಂದ 550 ರೂ.ಗಳವರೆಗೆ ನಿಗದಿ ಮಾಡಲಾಗಿದೆ. ಕಾರು ಅಥವಾ 4 ಚಕ್ರದ ವಾಹನಗಳಿಗೆ 650 ರೂ.ಗಳಿಂದ 85೦ ರೂ.ಗಳ ವರೆಗೆ ಸರ್ಕಾರ ದರ ನಿಗದಿ ಮಾಡಿದೆ. ಲಾರಿ, ಬಸ್ಸು ಮತ್ತು 10 ಚಕ್ರದ ವಾಹನಗಳಿಗೆ 650 ರೂ.ಗಳಿಂದ 800 ರೂಪಾಯಿವರೆಗೆ ಸರ್ಕಾರ ನಿಗದಿ ಮಾಡಿದೆ.

ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






