HSRP NUMBER PLATE ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 2023 ರ ನವೆಂಬರ್ 17 ಕೊನೆಯ ದಿನವಾಗಿತ್ತು ಆದರೆ ರಾಜ್ಯ ಸರ್ಕಾರ ಮೂರು ತಿಂಗಳು ಕಾಲ ವಿಸ್ತರಣೆ ಮಾಡಿದೆ.
ಇದನ್ನೂ ಓದಿ; ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಫೈರಿಂಗ್; ಮಲೆನಾಡಿನ ಈ ಜಿಲ್ಲೆಯಲ್ಲಿ ಹೈ ಅಲರ್ಟ್
2019 ರ ಎಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲೀಕರಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್.ಎಸ್.ಆರ್.ಪಿ) ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿದೆ. ಆರಂಭದಲ್ಲಿ ನವೆಂಬರ್ 17 ಕ್ಕೆ ಅಂತಿಮ ಗಡುವು ನೀಡಲಾಗಿತ್ತು. ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆ ಕಾರ್ಯ ನಡೆಯದಿರುವುದರಿಂದಾಗಿ ವಾಹನ ಮಾಲೀಕರನ್ನು ದೃಷ್ಟಿಯಲ್ಲಿರಿಸಿಕೊಂಡು ಮತ್ತೊಂದು ಅವಕಾಶ ನೀಡಬೇಕು ಎನ್ನುವ ನಿರ್ಧಾರಕ್ಕೆ ಸಾರಿಗೆ ಇಲಾಖೆ ಬಂದಿದೆ. ಹಾಗಾಗಿ ನವೆಂಬರ್ 17 ಕ್ಕೆ ಬದಲಾಗಿ 2024 ರ ಫೆಬ್ರವರಿ 17 ಕ್ಕೆ ಅಂತಿಮ ದಿನಾಂಕ ಬದಲಾವಣೆ ಮಾಡಲಾಗಿದೆ.
ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ?:(HSRP NUMBER PLATE)
ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್ ಗಳಲ್ಲಿ ನಂಬರ್ ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್ ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.
ಇದನ್ನೂ ಓದಿ; ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ
ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 14.11.2023
HSRP ಅಳವಡಿಸುವವರು ಗಮನಿಸಬೇಕಾದ ಪ್ರಮುಖ ಅಂಶಗಳು:
* https://transport.karnataka.gov.in www.siam.in ಮೂಲಕ ಮಾತ್ರ HSRP ಅಳವಡಿಕೆ ಕಾಯ್ದಿರಿಸಿಕೊಳ್ಳಿ.
* ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP ಒಂದೇ ರೀತಿಯ ಪ್ರೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ, ಅವುಗಳು HSRP ಫಲಕಗಳಾಗಿರುವುದಿಲ್ಲ.
* HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು/ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
* ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಆಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ, HSRP ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.
ಪ್ರಮುಖ ಸುದ್ದಿಗಳನ್ನು ಓದಿ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ