HSRP-Number Plate: ಅಳವಡಿಕೆಗೆ ಕೆಲವೇ ದಿನ ಮಾತ್ರ ಬಾಕಿ!

(HSRP-Number Plate) ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12 ರವರೆಗೆ ಇದ್ದು, ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಬಸ್​ ಪಾಸ್​ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ


2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು HSRP ಅಳವಡಿಸಿಕೊಳ್ಳಬೇಕು. ಹೇಗೆ ನಂಬರ್ ಪ್ಲೇಟ್ ಅಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ.

https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮವಾಹನ ತಯಾರಕರನ್ನು ಆಯ್ಕೆ ಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
• HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
• HSRP ಶುಲ್ಕವನ್ನು ಆನ್‌ ಲೈನ್‌ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.


ಇದನ್ನೂ ಓದಿ: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ


ನಿಮಗೆ HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ
https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
ಕಾಯ್ದಿರಿಸಿಕೊಳ್ಳಿ.
• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
• ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.


ಇದನ್ನೂ ಓದಿ: ಈ ರೀತಿಯ ಆಹಾರ ಪದ್ದತಿ ಅನುಸರಿಸಿದ್ರೆ ಮೂಳೆ ಸವೆತ ಪಕ್ಕಾ!; ಎಚ್ಚರ.. ಯಾವುದೇ ಕಾರಣಕ್ಕೂ ಹೀಗೆ ಮಾಡ್ಬೇಡಿ..


ಸಾರ್ವಜನಿಕರು ಆನ್ ಲೈನ್ ಮೂಲಕ HSRP ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ.


ಇದನ್ನೂ ಓದಿ: ಷೇರು ಮಾರುಕಟ್ಟೆಯ ಈ ಬೇಸಿಕ್ ವಿಚಾರಗಳನ್ನು ಸಿಂಪಲ್ಲಾಗಿ ತಿಳಿಯಿರಿ!; ಕನ್ನಡದಲ್ಲಿ.. ನಿಮಗೆ ಅರ್ಥವಾಗುವ ರೀತಿ ಮಾಹಿತಿ!


ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

HSRP-Number Plate: ಅಳವಡಿಕೆಗೆ ಕೆಲವೇ ದಿನ ಮಾತ್ರ ಬಾಕಿ!
HSRP-Number Plate: ಅಳವಡಿಕೆಗೆ ಕೆಲವೇ ದಿನ ಮಾತ್ರ ಬಾಕಿ!

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್