HSRP NUMBER PLATE: High Security Registration Plates

HSRP NUMBER PLATE: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅವಳಡಿಕೆಗೆ ಫೆಬ್ರವರಿ 17 ರ ಶನಿವಾರ ಕಡೆಯ ದಿನವಾಗಿತ್ತು. ಆದರೆ ಇದೀಗ ಮತ್ತೆ ಮೂರು ತಿಂಗಳು ಅವಧಿ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಸಾರಿಗೆ ಸಚಿವ ಆರ್. ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ; KOF ನಲ್ಲಿ ನೇಮಕಾತಿಗಾಗಿ; ಲೆಕ್ಕಪರಿಶೋಧಕರ ಭರ್ತಿಗೆ ಅರ್ಜಿ ಆಹ್ವಾನ

ಶೇ.9 ರಷ್ಟು ವಾಹನಗಳಿಗೆ ಮಾತ್ರ:
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೆಬ್ರವರಿ 17 ರವರೆಗೆ ಗಡುವು ವಿಸ್ತರಿಸುವಂತೆ ಸೂಚಿಸಿದ್ದರು. ಅದರಂತೆ ಸಾರಿಗೆ ಇಲಾಖೆಯು ಫೆಬ್ರವರಿ 17 ರವರೆಗೆ ಗಡುವು ವಿಸ್ತರಿಸಿತ್ತು. ಆ ನಂತರವೂ ಸಾರ್ವಜನಿಕರು HSRP ಅಳವಡಿಕೆಗೆ ಹಿಂದೇಟು ಹಾಕಿದ್ದು, 2 ಕೋಟಿ ಹಳೆ ವಾಹನಗಳಲ್ಲಿ ಈವರೆಗೆ ಸುಮಾರು 18.5 ಲಕ್ಷ ವಾಹನಗಳಿಗೆ ಅಂದರೆ ಶೇ.9 ರಷ್ಟು ವಾಹನಗಳಿಗೆ ಮಾತ್ರ HSRP ಅಳವಡಿಕೆಯಾಗಿದೆ.

ಇದನ್ನೂ ಓದಿ; ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್‌; ಕೆಲವೇ ತಿಂಗಳಲ್ಲಿ ಕೇಬಲ್ ಸೇತುವೆ ಸಿದ್ದ

ತಾಂತ್ರಿಕ ಸಮಸ್ಯೆಯೂ ಕಾರಣ:
ಮತ್ತೊಂದೆಡೆ HSRP ಅಳವಡಿಕೆಗಾಗಿ ಕೋರಿಕೆ ಸಲ್ಲಿಸುವ ವೆಬ್ ಪೋರ್ಟಲ್ ಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಆನ್ ಲೈನ್ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಈ ಕಾರಣಕ್ಕೆ ಮತ್ತೊಮ್ಮೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಿಸುವಂತೆ ಸಾರ್ವಜನಿಕರು ಹಾಗೂ ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘದ ಸದಸ್ಯರು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಈ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಗಡುವು ವಿಸ್ತರಿಸಲು ನಿರ್ಧರಿಸಿದೆ. ಈ ಮೊದಲು ಫೆ.17 ರ ಗಡುವಿನೊಳಗೆ HSRP ಅಳವಡಿಸದ ವಾಹನಗಳಿಗೆ 1 ಸಾವಿರ ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಈಗ ಮೂರು ತಿಂಗಳು ಕಾಲವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ.

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಏನಿದು HSRP ನಂಬರ್ ಪ್ಲೇಟ್ ?
ಈ HSRP ಅನ್ನು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ ಗಳಲ್ಲಿ ನಂಬರ್‌ ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ.

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

HSRP ನಂಬರ್ ಪ್ಲೇಟ್ ಪ್ರಯೋಜನಗಳು: (HSRP NUMBER PLATE:) 
HSRP ನಂಬರ್ ಪ್ಲೇಟ್‌ ನಲ್ಲಿ ನಿಮ್ಮ ವಾಹನದ ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಇರುತ್ತವೆ. ಈ ಮಾಹಿತಿಗಳು ಕೇಂದ್ರೀಯ ಡೆಟಾಬೇಸ್‌ನಲ್ಲಿ ಸಂಗ್ರಹ ಆಗಿರುತ್ತದೆ. ಒಂದೊಮ್ಮೆ ನಿಮ್ಮ ವಾಹನ ಕಳವಾದರೆ ಈ ಮಾಹಿತಿಯನ್ನ ಬಳಸಿಕೊಂಡು ಪತ್ತೆಹಚ್ಚಲು ಸಹಕಾರಿಯಾಗಿದೆ. ಏಕೆಂದರೆ, ನಿಮ್ಮ ವಾಹನಕ್ಕೆ ಹಾಕಿರುವ ನಂಬರ್ ಪ್ಲೇಟ್ ಅನ್ನು ಅನಧಿಕೃತವಾಗಿ ಬದಲಾವಣೆ ಮಾಡಲು ಅಸಾಧ್ಯ. ಕಳ್ಳರು ಈ ನಂಬರ್ ಪ್ಲೇಟ್ ಅನ್ನು ತೆಗೆಯಲು ಸಾಧ್ಯವಿಲ್ಲ. ಪ್ಲೇಟ್‌ ನಲ್ಲಿ ಇರುವ ಮಾಹಿತಿಯನ್ನ ತಿದ್ದಲು ಕೂಡಾ ಸಾಧ್ಯವಿಲ್ಲ.

ಇದನ್ನೂ ಓದಿ; ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್; ಐಸಿಎಂಆರ್ ಒಪ್ಪಿಗೆ- ದಿನೇಶ್ ಗುಂಡೂರಾವ್

ಒಂದು ವೇಳೆ ವಾಹನದ ಬದಲು ಕೇವಲ ಪ್ಲೇಟ್ ಕಳ್ಳತನ ಮಾಡಿದರೆ, ಅದನ್ನು ಮರುಬಳಕೆ ಮಾಡಲು ಸಾಧ್ಯವಿಲ್ಲ. ವಾಹನವನ್ನ ಕಳ್ಳತನ ಮಾಡಿ ನಂಬರ್ ಪ್ಲೇಟ್ ತೆಗೆದು ಭಯೋತ್ಪಾದನೆ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳುವುದನ್ನು HSRP ಮೂಲಕ ತಡೆಗಟ್ಟಬಹುದು.

HSRP NUMBER PLATE: High Security Registration Plates
HSRP NUMBER PLATE: High Security Registration Plates

ಹಾಗಾದರೆ ಯಾವ ವಾಹನಕ್ಕೆ HSRP ಅಳವಡಿಕೆ ಕಡ್ಡಾಯ:
ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ (HSRP NUMBER PLATE:) ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ‍್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲಾ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಇದನ್ನೂ ಓದಿ; ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ಬೋಧಕ ಹುದ್ದೆಗಳ ನೇಮಕ; ಪ್ರೌಢಶಾಲೆ, ಕಾಲೇಜುಗಳ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

HSRP ನಂಬರ್ ಪ್ಲೇಟ್ ಅವಳಡಿಕೆ ಹೇಗೆ:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ