(HSRP- NUMBER PLATE) ಎಲ್ಲಾ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕರ್ನಾಟಕ ಸರ್ಕಾರ ನೀಡಿದ್ದ ಗಡುವು ಮೇ 31ಕ್ಕೆ ಅಂತ್ಯವಾಗಿದೆ. ಆದರೆ ಸರ್ಕಾರ ಜೂನ್ 12ರ ತನಕ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೈಕೋರ್ಟ್ಗೆ ಹೇಳಿತ್ತು. ಕರ್ನಾಟಕ ಸರ್ಕಾರ ಹೇಳಿರುವ ಗಡುವು ಬುಧವಾರಕ್ಕೆ (ಇಂದು) ಮುಕ್ತಾಯವಾಗುತ್ತದೆ. ಗುರುವಾರದಿಂದ HSRP ನಂಬರ್ ಪ್ಲೇಟ್ ಆಳವಡಿಕೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆಯೇ? ಅಥವಾ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಇರುವ ಗಡುವು ಮತ್ತೆ ವಿಸ್ತರಣೆಯಾಗುತ್ತದೆಯೇ? ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
HSRP ನಂಬರ್ ಪ್ಲೇಟ್ ಕುರಿತು ಸಾರಿಗೆ ಸಚಿವ ಹೇಳಿದ್ದೇನು?;
ಆಂತರಿಕ ಸುರಕ್ಷತೆ ಮುಂತಾದ ಕಾರಣಗಳಿಂದ ವಾಹನಗಳಿಗೆ HSRP ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಅದರಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಜನರ ಮನವಿಗೆ ಸ್ಪಂದಿಸಿ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಗಡುವು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಂಬಂಧಿಸಿದಂತೆ ಜೂನ್ 12 ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡಲಿರುವ ಸೂಚನೆಯಂತೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!; ಭರ್ಜರಿ ಸಂಬಳ.. ಅರ್ಹತೆಗಳೇನು..?
ಕೋಟ್ಯಾಂತರ ವಾಹನ ಬಾಕಿ:
ಕರ್ನಾಟಕ ಸರ್ಕಾರದ ಆದೇಶದ ಅನ್ವಯ ಏಪ್ರಿಲ್ 1, 2019 ಕ್ಕೂ ಮೊದಲು ನೋಂದಣಿಯಾದ ವಾಹನಗಳು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು. ನಂಬರ್ ಪ್ಲೇಟ್ ಪಡೆಯಲು ಆನ್ ಲೈನ್ ಮೂಲಕ ನೋಂದಣಿ ಮಾಡಬೇಕು. ಈಗಾಗಲೇ ಎರಡು ಬಾರಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಗಡುವು ವಿಸ್ತರಣೆ ಮಾಡಲಾಗಿತ್ತು. ಆದ್ದರಿಂದ ಈ ಬಾರಿ ಗಡುವು ವಿಸ್ತರಣೆ ಮಾಡುವ ಸಾಧ್ಯತೆ ಕಡಿಮೆ ಇದೆ.
ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು
ಸಾರಿಗೆ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇನ್ನೂ ಕೋಟ್ಯಾಂತರ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಬಾಕಿ ಇದೆ. ನಗರ ಪ್ರದೇಶದಲ್ಲಿ ನಂಬರ್ ಪ್ಲೇಟ್ ಹಾಕುವ ಕಾರ್ಯ ಚುರುಕಿನಿಂದ ಸಾಗುತ್ತಿದೆ. ಆದರೆ ತಾಲೂಕು, ಹೋಬಳಿ ಮಟ್ಟದಲ್ಲಿ ಹಲವು ವಾಹನಗಳಿಗೆ ಇನ್ನೂ ನಂಬರ್ ಪ್ಲೇಟ್ ಹಾಕಿಲ್ಲ.
ಇದನ್ನೂ ಓದಿ: FAEA Scholarship ಗೆ ಅರ್ಜಿ ಅಹ್ವಾನ!; ಏನೆಲ್ಲಾ ಸೌಲಭ್ಯ ಸಿಗಲಿವೆ..? ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ಹೈಕೋರ್ಟ್ ಇಂದು ಯಾವ ಆದೇಶ ನೀಡಲಿದೆ ಎಂದು ಕಾದು ನೋಡಬೇಕು. ಅಲ್ಲದೇ ಜೂನ್ 15 ರಂದು ಸಚಿವ ಸಂಪುಟ ಸಭೆ ಇದ್ದು, ಸರ್ಕಾರ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ವಿಧಿಸಲಿದೆಯೇ? ಕಾದು ನೋಡಬೇಕು.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರೈತರೇ ತಪ್ಪದೇ ಈ ಕೆಲಸ ಮಾಡಿ; ಇಲ್ಲ ಅಂದ್ರೆ ಬರಲ್ಲಾ 17ನೇ ಕಂತಿನ ಹಣ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






