(HSRP -number plate) ರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಿದ್ದ ಗಡುವು ಮೂರು ದಿನಗಳಲ್ಲಿ ಅಂದರೆ, ಸೆಪ್ಟೆಂಬರ್ 15 ಕ್ಕೆ ಮುಕ್ತಾಯವಾಗಲಿದೆ. ಆ ಬಳಿಕ ಯಾವುದೇ ಕಾರಣಕ್ಕೂ ಮತ್ತಷ್ಟು ಸಮಯ ನೀಡದೆ ದಂಡ ಪ್ರಯೋಗಕ್ಕೆ ಮುಂದಾಗಲು ಕರ್ನಾಟಕ ಸಾರಿಗೆ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, HSRP ನಂಬರ್ ಪ್ಲೇಟ್ ಅಳವಡಿಸಲು 2023 ರ ಆಗಸ್ಟ್ ನಿಂದ ಅವಕಾಶ ನೀಡಲಾಗಿದೆ. ಈಗಾಗಲೇ ಸಾಕಷ್ಟು ಬಾರಿ ವಿಸ್ತರಣೆ ಮಾಡಲಾಗಿದೆ. ವಿಸ್ತರಣೆಗೂ ಒಂದು ಮಿತಿ ಇರುತ್ತದೆ. ಹೀಗಾಗಿ, ಸೆಪ್ಟೆಂಬರ್ 15 ರ ನಂತರ ವಿಸ್ತರಣೆ ಇರುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 2019 ರ ಏ.1 ಕ್ಕೂ ಮೊದಲು ನೋಂದಣಿಯಾದ 2 ಕೋಟಿ ವಾಹನಗಳು HSRP ಅಳವಡಿಸಿಕೊಳ್ಳಬೇಕಿದೆ. ಅದರಲ್ಲಿ 52 ಲಕ್ಷ ವಾಹನಗಳಿಗೆ ಮಾತ್ರ HSRP ಅಳವಡಿಸಲಾಗಿದೆ. ಇನ್ನೂ 1.48 ಕೋಟಿ ವಾಹನಗಳಿಗೆ HSRP ಅಳವಡಿಸಲು ಬಾಕಿ ಇದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಮೊದಲ ಬಾರಿ 500 ರೂ. ದಂಡ ವಿಧಿಸಲಾಗುತ್ತದೆ. ಅನಂತರ ಪ್ರತಿ ಬಾರಿ 1000 ರೂ. ದಂಡ ಹಾಕಲಾಗುತ್ತದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅಳವಡಿಕೆ ಹೇಗೆ?
* https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
* HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
* ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
* ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
ಇದನ್ನೂ ಓದಿ; ವಾಹನ ಸವಾರರ ಗಮನಕ್ಕೆ; ಇನ್ನು ನಾಲ್ಕು ದಿನಗಳ ನಂತರ ಫೈನ್ ಗ್ಯಾರಂಟಿ; ಯಾಕೆ ಗೊತ್ತಾ? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
HSRP ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೊದಲ ಬಾರಿ 2023 ರಲ್ಲಿ ಮೂರು ತಿಂಗಳು ಅವಕಾಶ ನೀಡಲಾಗಿತ್ತು. ವಾಹನ ಮಾಲೀಕರಿಂದ ಸ್ಪಂದನೆ ಸಿಗದ ಹಿನ್ನೆಲೆ 2024 ಫೆಬ್ರವರಿ 17 ರವರೆಗೆ, ಆ ಬಳಿಕ ಮೇ 31 ರವರೆಗೆ ಗಡುವು ನೀಡಿತ್ತು. ಆ ನಂತರ ಹೈಕೋರ್ಟ್ ಸೂಚನೆ ಮೇರೆಗೆ ಸೆಪ್ಟೆಂಬರ್ 15 ವರೆಗೂ ಅವಕಾಶ ನೀಡಿದೆ.
ನೋಂದಣಿ ಮಾಡಿಕೊಂಡ ಕೂಡಲೇ ಹೊಸ ನಂಬರ್ ಪ್ಲೇಟ್ ಬರುವುದಿಲ್ಲ. ಯಾರೆಲ್ಲಾ ಸೆಪ್ಟೆಂಬರ್ 15 ರ ಒಳಗೆ HSRP ನೋಂದಣಿ ಮಾಡಿಕೊಳ್ಳುತ್ತಾರೋ ಅವರು ಅದರ ರಶೀದಿಯನ್ನು ವಾಹನ ಚಲಾಯಿಸುವಾಗ ತಮ್ಮ ಬಳಿಯಲ್ಲಿ ಇಟ್ಟುಕೊಳ್ಳಬೇಕು. ಈ ಮೂಲಕ ಸಾರಿಗೆ ಅಧಿಕಾರಿಗಳು ಅಥವಾ ಪೊಲೀಸರು ತಪಾಸಣೆ ನಡೆಸುವಾಗ ನಂಬರ್ ಪ್ಲೇಟ್ ಇಲ್ಲ ಎಂದು ಪ್ರಶ್ನಿಸಿದರೆ ರಶೀದಿ ತೋರಿಸಿ ದಂಡದಿಂದ ತಪ್ಪಿಸಿಕೊಳ್ಳಬಹುದು.
ಇದನ್ನೂ ಓದಿ; ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಪಾವತಿಗಳ ಮೇಲೆ ಶೇ. 18 ರಷ್ಟು GST..?
ಮುಂದಿನ 3 ದಿನಗಳ ಒಳಗೆ HSRP ಬಾಕಿ ಉಳಿಸಿಕೊಂಡ ವಾಹನ ಮಾಲೀಕರು ನೋಂದಣಿ ಮಾಡಿಕೊಳ್ಳಿ. ಇಲ್ಲದಿದ್ದರೆ ದಂಡ ಪಾವತಿಗೆ ಸಿದ್ಧರಾಗಬೇಕಾಗುತ್ತದೆ.

ಇದನ್ನೂ ಓದಿ; ಹಿರಿಯ ನಾಗರಿಕರ ಆರೋಗ್ಯ ವೃದ್ಧಿಗೆ ಮೋದಿ ಪ್ಲಾನ್!; 70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಉಚಿತ ವಿಮೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






