Hsrp Number Plate ಕುರಿತು BIG UPDATE

(Hsrp Number Plate) ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಜೂನ್ 12 ರವರೆಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಏನಿದು HSRP ನಂಬರ್ ಪ್ಲೇಟ್?
ಈ hsrp ಅನ್ನು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್ ಗಳಲ್ಲಿ ನಂಬರ್ ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್ ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ.


ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!


ಯಾಕೆ ಇದನ್ನು ಹಾಕಬೇಕು?
* HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು, ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
* ನಂಬರ್‌ ಪ್ಲೇಟ್‌ ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. * ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ಇಂಡಿಯಾ ಎಂಬ ಪದ ಹಲವೆಡೆ ಇರುತ್ತದೆ.
* ಸುರಕ್ಷಿತ ನಂಬರ್‌ ಪ್ಲೇಟ್‌ ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
* ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು HSRP ಸಹಕಾರಿಯಾಗಲಿದೆ.
* ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
* ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.


ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ


ಯಾವ ವಾಹನಕ್ಕೆ hsrp ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ:
ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲಾ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.


ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ


ಹಾಕಿಸದಿದ್ದರೆ ಬೀಳುತ್ತೆ ಭಾರಿ ದಂಡ!
HSRP ಅಳವಡಿಸದವರಿಗೆ ಮೊದಲ ಬಾರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು. ನಂತರವೂ ಅವರು HSRP ಅಳವಡಿಸದಿದ್ದರೆ, ಅಳವಡಿಸುವವರೆಗೆ 1,000 ರೂ. ದಂಡ ವಿಧಿಸಲಾಗುವುದು.


ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ


HSRP ನಂಬರ್‌ ಪ್ಲೇಟ್‌ ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ HSRP NUMBER PLATE ನಂತೆಯೇ ಹೋಲಿಕೆ ಇರುವಂತೆ ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ RTO ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ HSRP ನಂಬರ್‌ ಪ್ಲೇಟ್‌ ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

Hsrp Number Plate ಕುರಿತು BIG UPDATE
Hsrp Number Plate ಕುರಿತು BIG UPDATE

ಇದನ್ನೂ ಓದಿ: ಟಿ20 ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಅಮೇರಿಕಾ ತಂಡಕ್ಕೆ ಜಯ; ಅಮೇರಿಕಾ ತಂಡದಲ್ಲಿ ಕಾಫಿನಾಡಿನ ಯುವಕನ ಭರ್ಜರಿ ಪರ್ಫಾರ್ಮೆನ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!