(hsrp Number plate) ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್ 12 ರವರೆಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ
ಹಳೆಯ ವಾಹನಗಳಿಗೆ ಅಂದರೆ ಏಪ್ರಿಲ್ 1, 2019 ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ಹಾಗಾದರೆ ಹೇಗೆ ಅಳವಡಿಸುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ
ನಂಬರ್ ಪ್ಲೇಟ್ ಅಳವಡಿಕೆ ಹೇಗೆ?;
• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
• HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
• HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ
HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ
• https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
ಕಾಯ್ದಿರಿಸಿಕೊಳ್ಳಿ.
• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್ ಗಳು / ಸ್ಮಾರ್ಟ್ ನಂಬರ್ ಪ್ಲೇಟ್ ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · • ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.
ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
ಸಾರ್ವಜನಿಕರು ಆನ್ ಲೈನ್ ಮೂಲಕ HSRP ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ವಿಯೆಟ್ನಾಂನಲ್ಲಿ ರೊಬಸ್ಟಾ ಕಾಫಿ ಧಾರಣೆ ಕುಸಿತ
ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






