HSRP NUMBER PLATES: ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಬೇಕು. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ನಿರೀಕ್ಷೆಗಿಂತ ಕಡಿಮೆ ಸಂಖ್ಯೆಯಲ್ಲಿ ವಾಹನ ಸವಾರರು HSRP ಅಳವಡಿಕೆ ಮಾಡಿದ್ದಾರೆ. ಹೀಗಾಗಿ ಈ ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದ ಡೆಡ್ ಲೈನ್ ಅನ್ನು 2024 ರ ಫೆಬ್ರವರಿ 17 ರವರೆಗೆ ವಿಸ್ತರಿಸಲಾಗಿತ್ತು.
ಇದನ್ನೂ ಓದಿ; ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
ಯಾವ ವಾಹನಗಳಿಗೆ ಈ ನಿಯಮ ಅನ್ವಯವಾಗುತ್ತದೆ?:
ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.
ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
HSRP ಅಳವಡಿಕೆಯ (HSRP NUMBER PLATES: ) ಕಾರ್ಯವಿಧಾನ ಹೇಗೆ?:
* https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
* ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
* HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
* HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
* ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
* ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
ಗಮನಿಸಬೇಕಾದ ಅಂಶವೆಂದರೆ:
* https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆ ಕಾಯ್ದಿರಿಸಿಕೊಳ್ಳಿ.
* ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್ ಗಳು / ಸ್ಮಾರ್ಟ್ ನಂಬರ್ ಪ್ಲೇಟ್ ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
* HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
* ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.
* ಅಳವಡಿಕೆಗೆ ದಿನಾಂಕ: 17-11-2023 ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ
ಟಿಡಿ.193 ಟಿಡಿಪಿ 2021, ದಿನಾಂಕ 16-11-2023 ರಲ್ಲಿ ದಿನಾಂಕ : 17-02-2024 ರವರೆಗೆ ವಿಸ್ತರಿಸಲಾಗಿರುತ್ತದೆ.

ಇದನ್ನೂ ಓದಿ; ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
HSRP ನಂಬರ್ ಪ್ಲೇಟ್ (HSRP NUMBER PLATES:) ಪ್ರಯೋಜನಗಳು:
HSRP ನಂಬರ್ ಪ್ಲೇಟ್ ನಲ್ಲಿ ನಿಮ್ಮ ವಾಹನದ ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಇರುತ್ತವೆ. ಈ ಮಾಹಿತಿಗಳು ಕೇಂದ್ರೀಯ ಡೆಟಾಬೇಸ್ ನಲ್ಲಿ ಸಂಗ್ರಹ ಆಗಿರುತ್ತದೆ. ಒಂದೊಮ್ಮೆ ನಿಮ್ಮ ವಾಹನ ಕಳವಾದರೆ ಈ ಮಾಹಿತಿಯನ್ನ ಬಳಸಿಕೊಂಡು ಪತ್ತೆಹಚ್ಚಲು ಸಹಕಾರಿಯಾಗಿದೆ. ಏಕೆಂದರೆ, ನಿಮ್ಮ ವಾಹನಕ್ಕೆ ಹಾಕಿರುವ ನಂಬರ್ ಪ್ಲೇಟ್ ಅನ್ನು ಅನಧಿಕೃತವಾಗಿ ಬದಲಾವಣೆ ಮಾಡಲು ಅಸಾಧ್ಯ. ಕಳ್ಳರು ಈ ನಂಬರ್ ಪ್ಲೇಟ್ ಅನ್ನು ತೆಗೆಯಲು ಸಾಧ್ಯವಿಲ್ಲ. ಪ್ಲೇಟ್ ನಲ್ಲಿ ಇರುವ ಮಾಹಿತಿಯನ್ನ ತಿದ್ದಲು ಕೂಡಾ ಸಾಧ್ಯವಿಲ್ಲ.
ಇದನ್ನೂ ಓದಿ; ಚಿನ್ನದ ಬೆಲೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಒಂದು ವೇಳೆ ವಾಹನದ ಬದಲು ಕೇವಲ ಪ್ಲೇಟ್ ಕಳ್ಳತನ ಮಾಡಿದರೆ, ಅದನ್ನು ಮರುಬಳಕೆ ಮಾಡಲು ಸಾಧ್ಯವಿಲ್ಲ. ವಾಹನವನ್ನ ಕಳ್ಳತನ ಮಾಡಿ ನಂಬರ್ ಪ್ಲೇಟ್ ತೆಗೆದು ಭಯೋತ್ಪಾದನೆ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳುವುದನ್ನು HSRP ಮೂಲಕ ತಡೆಗಟ್ಟಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್ ಗೆಲ್ಲುವ ಅವಕಾಶ
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
- rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್ಗಳ ನೇಮಕ
- ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್ ಪೋಸ್ಟ್ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
- ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply