HSRP Registration:ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?

(HSRP Registration) ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ (HSRP NUMBER PLATE) ಅಳವಡಿಕೆಗೆ ನೀಡಿದ ಗಡುವು ಇದೀಗ ಜೂನ್ 12 ರ ವರೆಗೆ ಇದ್ದು, 12 ನಂತರ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಿದ ವಾಹನ ಸವಾರರಿಗೆ ಭಾರಿ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಹೌದು, ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್.ಎಸ್.ಆರ್.ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12 ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019 ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಹೆಚ್.ಎಸ್.ಆರ್.ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಹೆಚ್.ಎಸ್.ಆರ್.ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.


ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!


ಯಾವ ವಾಹನಗಳಿಗೆ ಕಡ್ಡಾಯ:
ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ‍್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್.ಎಸ್.ಆರ್.ಪಿ) ಅಳವಡಿಸುವುದು ಕಡ್ಡಾಯ.


ಇದನ್ನೂ ಓದಿ: 1.16 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ; ಕಾರಣವೇನು ಗೊತ್ತಾ? ಇಲ್ಲಿದ ನೋಡಿ


ಈ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ನಂತರ ಮೇ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಜೂ.12 ರವರೆಗೆ ಸಮಯ ನಿಗದಿ ಮಾಡಲಾಗಿದೆ.

HSRP Registration:ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ...?
HSRP Registration:ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?

ಇದನ್ನೂ ಓದಿ: ರೈತರೇ ಗಮನಿಸಿ..; ಬರ ಪರಿಹಾರ ಪಡೆಯಲು “ಫೂಟ್ಸ್ ಐಡಿ” ಕಡ್ಡಾಯ..!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ