HSRP: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್

(HSRP) ರಾಜ್ಯದಲ್ಲಿ ಎಲ್ಲಾ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!


ಅತಿ ಸುರಕ್ಷಿತ ನೋಂದಣಿ ಫಲಕ HSRP ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಈ ತಿಂಗಳು ಅಂದರೆ ಮೇ 31ಕ್ಕೆ ಅಂತ್ಯವಾಗಲಿದೆ. ಆದರೂ ಸಹ HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜೂನ್ 12 ರವರೆಗೆ ಯಾವುದೇ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್ ಗೆ ತಿಳಿಸಿದೆ. ಹೀಗಾಗಿ HSRP ನಂಬರ್ ಪ್ಲೇಟ್ ಹಾಕಿಸಿಕೊಳ್ಳದ ವಾಹನ ಸವಾರರಿಗೆ ಜೂನ್ 12 ರ ವರೆಗೆ ಕಾಲಾವಕಾಶವಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?


HSRP ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್ ​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ನಿನ್ನೆ (ಮೇ 21) ಹೈಕೋರ್ಟ್​ ಮುಂದೆ ಈ ರಿಟ್​ ಅರ್ಜಿ ವಿಚಾರಣೆಗೆ ಬಂದಿದೆ. ಆದರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್​​ ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ ಹೈಕೋರ್ಟ್​ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.


ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್;  ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಸಾರಿಗೆ ಇಲಾಖೆ ಮೊದಲು High Security Registration Plates (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು 2023ರ ನವೆಂಬರ್ 17ರ ಗಡುವು ಕೊಟ್ಟಿತ್ತು. ಬಳಿಕ ಅದನ್ನು 2024ರ ಫೆಬ್ರವರಿ 17ರ ತನಕ ವಿಸ್ತರಣೆ ಮಾಡಲಾಗಿತ್ತು, ನಂತರ ಅದನ್ನು ಮೇ 31ರ ವರೆಗೆ ವಿಸ್ತರಿಸಲಾಗಿತ್ತು. ಆದರೆ, ಮತ್ತಷ್ಟು ದಿನ ವಿಸ್ತರಣೆ ಮಾಡುವಂತೆ ಹೈಕೋರ್ಟ್ ​ಗೆ ರಿಟ್ ಅರ್ಜಿ ಸಲ್ಲಿಸಿದ್ದರಿಂದ ಇದೀಗ ರಾಜ್ಯ ಸರ್ಕಾರ ಜೂನ್​ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಜೂನ್ 12ರ ವರೆಗೆ ಕಾಲಾವಕಾಶ ಸಿಕ್ಕಂತಾಗಿದೆ.

HSRP: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್
HSRP: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್