ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದ್ವಿ ಚಕ್ರ ವಾಹನ ಸವಾರರಿಗೆ ಕಾಫಿನಾಡ ಪೊಲೀಸರು ಶಾಕ್ ನೀಡಿದ್ದು, ಚಿಕ್ಕಮಗಳೂರು ನಗರದ ಗಲ್ಲಿ-ಗಲ್ಲಿಗಳಲ್ಲಿ ಹಾಫ್ ಹೆಲ್ಮೇಟ್ ಅನ್ನು ಸೀಜ್ ಮಾಡಿರುವ ಘಟನೆ ನಡೆದಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ
ಜನ ಅಪಘಾತದಿಂದ ತಪ್ಪಿಸಿಕೊಳ್ಳಲು ಹೆಲ್ಮೆಟ್ ಹಾಕೋದಕ್ಕಿಂತಲೂ ಹೆಚ್ಚಾಗಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೆಲ್ಮೆಟ್ ಧರಿಸುವವರೇ ಹೆಚ್ಚು. ಇಂತಹ ವಾಹನ ಸವಾರರಿಗೆ ಕಾಫಿನಾಡ ಪೊಲೀಸರು ಆರೋಗ್ಯ ಪಾಠ ಹೇಳಿದ್ದಾರೆ.
ಇದನ್ನೂ ಓದಿ; ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟ ದುಷ್ಕರ್ಮಿಗಳು
“500 ಫೈನ್ ಹಾಕ್ಬೇಕೋ, ತಿಳುವಳಿಕೆ ಹೇಳಿದ್ರೆ ಸಾಕೋ, ಇವತ್ ಫೈನ್ ಹಾಕಲ್ಲ, ಹಾಗೇ ಬಿಡ್ತೀನಿ” ಎಂದು ಬೈಕ್ ಸವಾರರಿಗೆ ಎಚ್ಚರಿಕೆ ನೀಡುತ್ತಾ ಹಾಫ್ ಹೆಲ್ಮೇಟ್ ಸೀಜ್ ಮಾಡಿ ಹೊಸ ಹೆಲ್ಮೆಟ್ ತೆಗೆದುಕೊಳ್ಳಬೇಕು. ತಲೆ, ಕಿವಿ, ಮುಖ ಕವರ್ ಆಗುವಂತಹಾ ಹೆಲ್ಮೇಟ್ ಹಾಕಬೇಕು ಎಂದು ಹಾಫ್ ಹೆಲ್ಮೇಟ್ ಬೈಕ್ ಸವಾರರಿಗೆ ಸೂಚನೆ ನೀಡಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ವರ್ಗಾವಣೆ
- ಚಿಕ್ಕಮಗಳೂರು: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಪಿಕಪ್ ತಡೆದ ಬಿಜೆಪಿ ಕಾರ್ಯಕರ್ತರು; ಚಾಲಕ ಪರಾರಿ
- ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ ಕಾರ್ಯಾಚರಣೆ ವೇಳೆ ಮಹತ್ವದ ದಾಖಲೆ ವಶಕ್ಕೆ
ಇನ್ನು ಕಳೆದ 2 ದಿನದಲ್ಲಿ ಸಾವಿರಾರು ಹೆಲ್ಮೇಟ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.
ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟ ದುಷ್ಕರ್ಮಿಗಳು
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಾಂಸಕ್ಕಾಗಿ ದುಷ್ಕರ್ಮಿಗಳು ಎಮ್ಮೆಯೊಂದನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮದ ಎಬಿಸಿ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.
ಇದನ್ನೂ ಓದಿ; ಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ
ಮಾಂಸಕ್ಕಾಗಿ ಎಮ್ಮೆಗೆ ಗುಂಡಿಟ್ಟಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಖ್ಯ ಆರೋಪಿ ಪರಾರಿಯಾಗಿದ್ದು, ಸದ್ಯ ಇಬ್ಬರನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವಾತನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಾಸನ ಎಸ್‌ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.