Tuesday, November 28, 2023
Homeಮಲೆನಾಡುಚಿಕ್ಕಮಗಳೂರುನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (RSS) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.

ಚಿಕ್ಕಮಗಳೂರು: ಮಳೆಯಿಂದ ಹಾನಿಯಾದ ಕುಟುಂಬಕ್ಕೆ ಶಾಸಕ ತಮ್ಮಯ್ಯ ನೆರವು

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಡಿ.ತಮ್ಮಯ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ; ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು

ಸಖರಾಯಪಟ್ಟಣದಲ್ಲಿ ಕಳೆದ ರಾತ್ರಿ ಅಲಿಕಲ್ಲು ಮಳೆಗೆ ಮನೆಯ ಮೇಲ್ಚಾವಣಿಯ ಶೀಟ್‌ಗಳು ಹಾರಿ ಹೋಗಿದ್ದವು. ಆಗಲೇರಿ ಗ್ರಾಮದ ಮಂಗಳಮ್ಮ, ರತ್ನಮ್ಮ, ರಂಗಣ್ಣ ಎಂಬುವರ ಮನೆಗೆ ಹಾನಿಯಾಗಿ, ಮನೆಯಲ್ಲಿದ್ದ ಆಹಾರ ಸಾಮಗ್ರಿ ಹಾಗೂ ಪೀಠೋಪಕರಣಗಳಿಗೂ ಹಾನಿಯಾಗಿತ್ತು.

ಇನ್ನು ಮಳೆಯಿಂದ ಮನೆ ಹಾನಿಯಾದ ಕುಟುಂಬಗಳಿಗೆ ತಮ್ಮಯ್ಯ ಭೇಟಿ ನೀಡಿ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಹಾಗೂ ರೆವೆನ್ಯೂ ಇನ್ ಸ್ಪೆಕ್ಟರ್ ಗೆ ಸೂಚನೆ ನೀಡಿ ಮನೆಗಳಿಗೆ ತುರ್ತಾಗಿ ಟಾರ್ಪಲ್ ವ್ಯವಸ್ಥೆ ಮಾಡಲು ಪಿಡಿಓಗೆ ಆದೇಶಿಸಿದರು.

ಇದನ್ನೂ ಓದಿ; ಕಟ್ಟಡ ಕುಸಿಯುವ ಭೀತಿಯಲ್ಲಿ ಸರ್ಕಾರಿ ಶಾಲೆ

Most Popular

Recent Comments