IAF Recruitment 2026: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

IAF Recruitment 2026:ಭಾರತೀಯ ವಾಯುಪಡೆ (IAF) 2026ರ ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಇದು ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು (Agniveer Vayu) ಹುದ್ದೆಗಳಿಗೆ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ದೇಶಾದ್ಯಂತ ಇರುವ ವಾಯುಪಡೆ ನಿಲ್ದಾಣಗಳ ಹಾಸ್ಪಿಟಾಲಿಟಿ ಮತ್ತು ಹೌಸ್ ಕೀಪಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಸೇವೆ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು, ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸನ್ನು ನನಸು ಮಾಡುವ ಅವಕಾಶವಾಗಿದೆ.


ನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ


ಅರ್ಹತೆ:
* ಅರ್ಜಿದಾರ ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
* ಅವಿವಾಹಿತ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
* ದೈಹಿಕ ಅರ್ಹತೆಯಾಗಿ ಅಭ್ಯರ್ಥಿಗಳ ಎತ್ತರ ಕನಿಷ್ಠ 152 ಸೆಂಟಿಮೀಟರ್ ಇರಬೇಕು.

ವಯೋಮಿತಿ:
* ವಯೋಮಿತಿ 21 ವರ್ಷಗಳ ಒಳಗಿರಬೇಕು.
* ಅಧಿಸೂಚನೆಯಲ್ಲಿ ನೀಡಿರುವ ಎಲ್ಲಾ ಮಾನದಂಡಗಳನ್ನು ಪೂರೈಸಿದವರು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ದೈಹಿಕ ಸಾಮರ್ಥ್ಯ
* SST ಆಧಾರಿತವಾಗಿರುತ್ತದೆ.

ವೇತನ:
* ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 30,000 ವೇತನವನ್ನು ಇತರ ಭತ್ಯೆಗಳೊಂದಿಗೆ ನೀಡಲಾಗುತ್ತದೆ.
* ಈ ನೇಮಕಾತಿ ನಾಲ್ಕು ವರ್ಷಗಳ ಒಪ್ಪಂದದ ಆಧಾರದ ಮೇಲೆ ನಡೆಯಲಿದೆ.


ನ್ನೂ ಓದಿ: ಡ್ರೋನ್ ಪೈಲಟ್ ಆಗಲು ಇಲ್ಲಿದೆ ಸುವರ್ಣಾವಕಾಶ: ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಉಚಿತ ಡ್ರೋನ್ ಪೈಲಟ್ ತರಬೇತಿ


ಅರ್ಹ ಅಭ್ಯರ್ಥಿಗಳು ರಾಷ್ಟ್ರಸೇವೆ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು,ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ನನಸಾಗಿಸಿಕೊಳ್ಳಿ.ವೃತ್ತಿಜೀವನದ ದಾರಿ ತೆರೆದಿಡುವ ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಸಮಯ ಹಾಳು ಮಾಡದೆ ಕೊನೆಯ ದಿನಾಂಕ ಫೆಬ್ರವರಿ 23 ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

IAF Recruitment 2026: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
IAF Recruitment 2026: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (IAF Recruitment 2026:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ