(IDBI Bank:) ಐಡಿಬಿಐ (IDBI) ಬ್ಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಮುಖ ಸರ್ಕಾರಿ ವಲಯದ ಬ್ಯಾಂಕ್ ಆಗಿರುವ IDBI, ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ
ಹುದ್ದೆಗಳ ವಿವರ:
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
- ಅಸಿಸ್ಟೆಂಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ:
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (JAM) ಗ್ರೇಡ್ ‘O’: 1100 ಹುದ್ದೆಗಳು.
- ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ‘A’: 200 ಹುದ್ದೆಗಳು.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷಗಳ ಒಳಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ಆರಂಭ:
ಮಾರ್ಚ್ 8, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮಾರ್ಚ್ 19, 2026
ಆಯ್ಕೆ ಪ್ರಕ್ರಿಯೆ:
- ಆನ್‌ಲೈನ್ ಲಿಖಿತ ಪರೀಕ್ಷೆ: ಮೊದಲ ಹಂತದಲ್ಲಿ ಪರೀಕ್ಷೆ ನಡೆಯಲಿದೆ.
- ದಾಖಲೆ ಪರಿಶೀಲನೆ: ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆಗಳ ಪರಿಶೀಲನೆ ಇರುತ್ತದೆ.
- ಸಂದರ್ಶನ (Interview): ಅಂತಿಮವಾಗಿ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್
ಅರ್ಜಿ ಶುಲ್ಕ:
- SC/ST/PwD ಅಭ್ಯರ್ಥಿಗಳಿಗೆ: 250.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1050.
- (ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ).
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು IDBI ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ‘Careers’ ವಿಭಾಗದಲ್ಲಿ ಲಭ್ಯವಿರುವ ‘Apply Online’ ಲಿಂಕ್ ಮೂಲಕ ಫಾರ್ಮ್ ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳುವುದು ಉತ್ತಮ.

ಇತ್ತೀಚಿನ ಜನಪ್ರಿಯ ಸುದ್ದಿಗಳು (IDBI Bank:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





