illegal Land: ಅಕ್ರಮ ಭೂಮಿ ಮಂಜೂರು ತನಿಖೆಗೆ 15 ತಹಸೀಲ್ದಾರ್‌ ತಂಡ!

illegal Land: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ಅಕ್ರಮ ಭೂ ಮಂಜೂರಾತಿ ಪ್ರಕರಣದ ತನಿಖೆ ನಡೆಸಲು ತಹಸೀಲ್ದಾರ್ ಗಳನ್ನು ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ;  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ

ಇದನ್ನೂ ಓದಿ; ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕಾಫಿನಾಡ ಜಿಲ್ಲಾಸ್ಪತ್ರೆ

ಕಡೂರು ತಾಲೂಕಿನಲ್ಲಿ ಸುಮಾರು 2 ಸಾವಿರ ಎಕರೆಯಷ್ಟು ಗೋಮಾಳ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿಕೊಡಲಾಗಿದೆ. ಅನೇಕ ಮಂದಿ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಅಕ್ರಮವಾಗಿ ಭೂ ಮಂಜೂರು ಮಾಡಿಕೊಡಲಾಗಿದೆ ಎಂದು ದೂರುಗಳು ಕೇಳಿಬಂದಿದ್ದವು. ಹಾಗೆಯೇ ಮೂಡಿಗೆರೆ ತಾಲೂಕಿನಲ್ಲಿ ಎರಡು ಮೂರು ವರ್ಷಗಳಲ್ಲಿ ನೂರಾರು ಮಂದಿಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಿಕೊಡಲಾಗಿದೆ. ಯಾವುದೇ ನಿಯಮಗಳನ್ನು ಪಾಲಿಸದೇ, ಅಕ್ರಮ ಸಕ್ರಮ ಸಮಿತಿಯಲ್ಲಿ ಮಂಡಿಸದೇ ಬೇಕಾಬಿಟ್ಟಿಯಾಗಿ ಭೂಮಿ ಮಂಜೂರು ಮಾಡಿಕೊಡಲಾಗಿದೆ ಎಂದು ದೂರುಗಳು ಕೇಳಿಬಂದಿದ್ದವು. ಹೀಗೆ ಬಹಳಷ್ಟು ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ; ಮೂಡಿಗೆರೆ: ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ


ಇತ್ತೀಚಿನ ಜನಪ್ರಿಯ ಸುದ್ದಿಗಳು   


illegal Land: ಬಹಳಷ್ಟು ಕಡತಗಳು ತನಿಖೆಗೆ ಬಾಕಿ ಇರುವುದರಿಂದ ಸರ್ಕಾರ ಪ್ರಕರಣಗಳ ತನಿಖೆಗೆ 15 ಅಧಿಕಾರಿಗಳ ವಿಶೇಷ ತನಿಖೆಗೆ ನಿಯೋಜನೆ ಮಾಡಿದೆ. ತನಿಖೆಗೆ ರಚನೆ ಮಾಡಲಾದ ತಂಡದಲ್ಲಿ ತಹಶೀಲ್ದಾರ್ ಗ್ರೇಡ್ 1 ಮತ್ತು ಗ್ರೇಡ್ 2 ಶ್ರೇಣಿಯ ಒಟ್ಟು 15 ಅಧಿಕಾರಿಗಳನ್ನು ನಿಯೋಜಿಸಿದ್ದು ಕಾರ್ಯಪ್ರವೃತ್ತರಾಗಬೇಕಾಗಿದೆ. ನಿಯೋಜಿತ ಅಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳ ಬಳಿ ಕರ್ತವ್ಯಕ್ಕೆ ಹಾಜರಾಗಿ ತನಿಖಾ ವರದಿ ನೀಡುವವರೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-08.08.2023

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ; ರಾಜ್ಯದಲ್ಲಿ 1714 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ
  2. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಗುದ್ದಿದ ರಭಸಕ್ಕೆ ಬಸ್ಸಿನ ಮೇಲೆ ಬಿದ್ದ ಮರ
  3. ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕಾಫಿನಾಡ ಜಿಲ್ಲಾಸ್ಪತ್ರೆ
  4. ಮೂಡಿಗೆರೆ: ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ
  5. ಮೂಡಿಗೆರೆ: ಕ್ರಿಶ್ಚಿಯನ್ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣ
  6. ಮಗಳು ಅಧ್ಯಕ್ಷೆ, ತಾಯಿ ಉಪಾಧ್ಯಕ್ಷೆ | ಎಲ್ಲಿದು
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-08.08.2023
  8. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಸಾಲ ಪಡೆಯಬೇಕೆಂದರೆ ಏನು ಮಾಡಬೇಕು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇