(illegal pump sets;) ರಾಜ್ಯದ ರೈತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆ ನೀಡಿದ್ದು, ಅಕ್ರಮವಾಗಿ ಬಳಸಲಾಗುತ್ತಿರುವ ಕೃಷಿ ಪಂಪ್ಸೆಟ್ಗಳನ್ನು ಮೂರು ತಿಂಗಳೊಳಗೆ ಸಕ್ರಮಗೊಳಿಸಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ ನೀಡಿದ್ದಾರೆ. ಗಡುವಿನೊಳಗೆ ಪಂಪ್ಸೆಟ್ಗಳನ್ನು ಸಕ್ರಮಗೊಳಿಸದಿದ್ದರೆ ಅಂತಹ ವಿದ್ಯುತ್ ಸಂಪರ್ಕಗಳನ್ನು ಶಾಶ್ವತವಾಗಿ ಕಡಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ
ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಕ್ಷೇತ್ರದಲ್ಲಿ ಉಂಟಾಗುತ್ತಿರುವ ವಿದ್ಯುತ್ ಅವ್ಯವಸ್ಥೆಯನ್ನು ನಿಯಂತ್ರಿಸಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದರು.
ಸಚಿವರು ನೀಡಿದ ಮಾಹಿತಿಯ ಪ್ರಕಾರ, ಸಾಮಾನ್ಯವಾಗಿ ಒಂದು ವಿದ್ಯುತ್ ಪರಿವರ್ತಕ (ಟ್ರಾನ್ಸ್‌ಫಾರ್ಮರ್) ಎರಡು ಅಥವಾ ಮೂರು ಪಂಪ್ಸೆಟ್ಗಳ ಭಾರವನ್ನು ಮಾತ್ರ ಹೊರುವ ಸಾಮರ್ಥ್ಯ ಹೊಂದಿರುತ್ತದೆ. ಆದರೆ ಹಲವೆಡೆ ಒಂದೇ ಟ್ರಾನ್ಸ್‌ಫಾರ್ಮರ್‌ಗೆ ಅನೇಕ ಅಕ್ರಮ ಪಂಪ್ಸೆಟ್ಗಳನ್ನು ಜೋಡಿಸಲಾಗುತ್ತಿರುವುದರಿಂದ ಓವರ್‌ಲೋಡ್ ಉಂಟಾಗಿ ಪರಿವರ್ತಕಗಳು ಪದೇ ಪದೇ ಸುಟ್ಟು ಹೋಗುತ್ತಿವೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಈ ರೀತಿ ಟ್ರಾನ್ಸ್‌ಫಾರ್ಮರ್‌ಗಳು ಸುಡುವುದರಿಂದ ಅವುಗಳನ್ನು ದುರಸ್ತಿ ಮಾಡುವುದು ಮತ್ತು ಬದಲಾಯಿಸುವುದು ಸರ್ಕಾರ ಹಾಗೂ ವಿದ್ಯುತ್ ಇಲಾಖೆಗೆ ಭಾರೀ ಆರ್ಥಿಕ ಹೊರೆ ಆಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯ ಸುಮಾರು 4.50 ಲಕ್ಷ ಕೃಷಿ ಪಂಪ್ಸೆಟ್ಗಳಿದ್ದು, ಈ ಪೈಕಿ ಈಗಾಗಲೇ 2.75 ಲಕ್ಷ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ ರೈತರು ಮುಂದಿನ 90 ದಿನಗಳೊಳಗೆ ನಿಗದಿತ ಶುಲ್ಕ ಪಾವತಿಸಿ ತಮ್ಮ ಪಂಪ್ಸೆಟ್ಗಳನ್ನು ಅಧಿಕೃತಗೊಳಿಸಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಗಡುವಿನ ನಂತರವೂ ಸಕ್ರಮಗೊಳ್ಳದ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೆ ಕಡಿತಗೊಳಿಸಲು ಇಲಾಖೆ ಸಿದ್ಧತೆ ನಡೆಸಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (illegal pump sets;)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





