ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೃಹ ಬಂಧನದಲ್ಲಿಟ್ಟಿದ 18 ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಚೆಲುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು
ಇದನ್ನೂ ಓದಿ; ಸಿಡಿಲು ಬಡಿದು ಮಹಿಳೆ ಸಾವು
ರೈಲ್ವೆ ಹಾಗೂ ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರಿಗೆ ಕೆಲಸ ಕೊಡಿಸುತ್ತೇನೆಂದು ಕರೆದುಕೊಂಡು ಬಂದ ಆರೋಪಿ ಮುನೇಶ್ ಎಲ್ಲರನ್ನೂ ಒಂದೆಡೆ ಕೂಡಿ ಹಾಕಿದ್ದ. ಇವರೆಲ್ಲರನ್ನೂ ಒಂದೇ ವಾಹನದಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗಿ ಅವರಿಂದ ಕೆಲಸ ಮಾಡಿಸಿಕೊಂಡು, ಸರಿಯಾಗಿ ವೇತನ, ಆಹಾರ ನೀಡದೆ, ಚಿತ್ರಹಿಂಸೆ ಕೊಟ್ಟು ಮತ್ತೆ ತೋಟದ ಮನೆಯಲ್ಲಿ ಕೂಡಿ ಹಾಕುತ್ತಿದ್ದ ಇತನನ್ನು ಇದೀಗ ಬಂಧಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ
- ಸಾಲಬಾಧೆಯಿಂದ ಬೇಸತ್ತ ಯುವಕರೈಲಿಗೆ ತಲೆಕೊಟ್ಟು ಆತ್ಮಹತ್ಯೆ
- ಸರಕು ಸಾಗಣೆ ವಾಹನ ಮತ್ತು ಸ್ಕೂಟರ್ ಮಧ್ಯೆ ಅಪಘಾತ; ಸ್ಕೂಟರ್ ಸವಾರ ಸಾವು
ಆರೋಪಿ ಮುನೇಶ್, ಯಾರನ್ನೂ ಹೊರಗೆ ಬಿಡದೆ ಅವರನ್ನು ದುಡಿಸಿಕೊಂಡು ಜೊತೆಗೆ ಅವರಿಗೆ ಕಿರುಕುಳ ನೀಡುತ್ತಿದ್ದ. ಸರಿಯಾಗಿ ಸ್ನಾನ, ಬಟ್ಟೆ, ಆಹಾರವಿಲ್ಲದೆ ಪರದಾಡುತ್ತಿದ್ದರು.
ಇನ್ನು ಈ ಬಂಧಿತನಾಗಿರುವ ಆರೋಪಿ ಮುನೇಶ್ ಈಗಾಗಲೇ ಮೂರು ಬಾರಿ ಇಂತಹುದೆ ಘಟನೆಯಲ್ಲಿ ಬಂಧಿಸಲಾಗಿತ್ತು. ಇದೀಗ ಮತ್ತೆ ನಾಲ್ಕನೇ ಬಾರಿಗೆ ಅರೆಸ್ಟ್ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಹದಿನೆಂಟು ಮಂದಿಯನ್ನು ರಕ್ಷಿಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ; ಬೈಕ್‌ನಿಂದ ನಿಯಂತ್ರಣ ತಪ್ಪಿ ಬಿದ್ದು ಮಹಿಳೆ ಸಾವು

ಬಿರುಗಾಳಿ ಮಳೆ ಸೃಷ್ಟಿಸಿದ ಅವಾಂತರ: ಎಲ್ಲೆಲ್ಲಿ ಏನೇನು?
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಮೂಲಕ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದಾನೆ ಹಲವೆಡೆ ಬೆಳೆಗಳು ನಾಶವಾಗಿದೆ, ಮನೆಗಳ ಮೇಲ್ಚಾವಣಿ ಹಾರಿ ಹೋಗಿದೆ.
ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲವೆಡೆ ನಿನ್ನೆ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಬೇಲೂರು, ಚೀಕನಹಳ್ಳಿ, ಮೂಡಿಗೆರೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತು ಮೂರು ಟ್ರಾನ್ಸ್ ಫಾರ್ಮ ಗಳು ಹಾಳಾಗಿವೆ. ಮತ್ತೊಂದೆಡೆ ಕೋನರ್ಲು ಗ್ರಾಮದಲ್ಲಿ ಬಿರುಗಾಳಿಗೆ ಹುಸೇನ್ ಎಂಬುವವರ ವಾಸದ ಮನೆಯ ಮೇಲ್ನಾವಣಿ ಹಾರಿ ಹೋಗಿದೆ. ಇನ್ನು ಭಾರಿ ಮಳೆಯಿಂದ ಟ್ರಾನ್ಸ್ಫಾರ್ಮ ಗಳು ಹಾಳಾದ ಹಿನ್ನೆಲೆ ನಿನ್ನೆಯಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗೆಯೆ ಬೇಲೂರು ತಾಲೂಕಿನ, ಬಳ್ಳೂರು ಗ್ರಾಮದಲ್ಲಿ ಧರ್ಮೇಗೌಡ ಎಂಬುವವರ ಜಮೀನಿನಲ್ಲಿ ನೂರಾರು ಬಾಳೆ ಗಿಡಗಳು ಮುರಿದು ಬಿದ್ದಿದ್ದು, ಬಾಳೆ ಬೆಳೆ ಕಳೆದುಕೊಂಡ ರೈತ ಧರ್ಮೇಗೌಡ ಕಾಂಗಾಲಾಗಿದ್ದಾರೆ. ಅಲ್ಲದೆ ಗಾಳಿ, ಮಳೆಯಿಂದ ನೆಲಕ್ಕುರುಳಿದ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.
ಇದನ್ನೂ ಓದಿ; ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ; ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ









Leave a Reply