Tuesday, November 28, 2023
Homeರಾಜಕೀಯಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕಿರುವ ಏಕೈಕ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಸುಳ್ಳು ಹೇಳುವ ಅಭ್ಯಾಸವಿದೆ: ಇಕ್ಬಾಲ್ ಅನ್ಸಾರಿ

ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕಿರುವ ಏಕೈಕ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಸುಳ್ಳು ಹೇಳುವ ಅಭ್ಯಾಸವಿದೆ: ಇಕ್ಬಾಲ್ ಅನ್ಸಾರಿ

ಕೊಪ್ಪಳ : ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಗಂಗಾವತಿಯಲ್ಲಿ ಸುದ್ದಿಗಾರರಿಗೆ ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಜನತೆಗೆ ಸಿದ್ದರಾಮಯ್ಯನವರು ಒಬ್ಬರೇ ನಾಯಕ ಎಂದು ಹೆಚ್. ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ನಾನು ಸಚಿವನಾಗಿದ್ದಾಗ ಅಭಿವೃದ್ದಿಗೆ ಹಣವನ್ನು ಕೇಳಿದ್ರೆ, ನಮ್ಮನ್ನು ಕುಮಾರಸ್ವಾಮಿ ಬೈತಿದ್ರು 2008 ರಲ್ಲಿ ನಡೆದ ಚುನಾವಣೆಯಲ್ಲಿ ನಾನು ಸೋಲನ್ನು ಅನುಭವಿಸಲು, ಮುಸ್ಲಿಮರೇ ಕಾರಣ ಮುಸ್ಲಿಂ ಸಮುದಾಯದವರು ಜೆಡಿಎಸ್ ಪಕ್ಷವನ್ನು ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಆರೋಪವನ್ನು ಮಾಡಿದ್ದರು. ಕುಮಾರಸ್ವಾಮಿಗೆ ಬಹಳ ಸುಳ್ಳು ಹೇಳುವ ಅಭ್ಯಾಸವಿದೆ ಎಂದು ಇಕ್ಬಾಲ್ ಅನ್ಸಾರಿ ಹೇಳಿದರು.

ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಲ್ಪಸಂಖ್ಯಾತರಿಗೆ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ವಕ್ಫ್ ಬೋರ್ಡ್ ಇಲಾಖೆಯಿಂದ ಹಣವನ್ನು ಕೊಡಿಸಿದ್ದಾರೆ. ದೇವೇಗೌಡರು ನನಗೆ ಮಂತ್ರಿ ಸ್ಥಾನವನ್ನು ಕೊಟ್ಟಿದ್ದಾರೆ ಇದನ್ನು ನಾನಾಗಲಿ, ನನ್ನ ಕುಟುಂಬವಾಗಲಿ ಮರೆಯಲು ಸಾಧ್ಯವಿಲ್ಲ.ಆದರೆ ಕುಮಾರಸ್ವಾಮಿ ನಮಗೆ ಸಹಕಾರವನ್ನು ಕೊಡಲಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ ನಡೆಸಿದರು

Most Popular

Recent Comments