(Kadugolla community:) 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು
(Kadugolla community:) ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು, ಈ ಯೋಜನೆಗೆ ಕೊನೆಯ ದಿನಾಂಕವಿರುವುದಿಲ್ಲ), ಗಂಗಾ ಕಲ್ಯಾಣ ಯೋಜನೆ (ದಕ್ಷಿಣ ಕನ್ನಡ, ಉಡುಪಿ, ಕೊಡಗು. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು),
* ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
* ಒಂದು ಕುಟುಂಬದ ಒಬ್ಬರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
* 2023-24, 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಬೇರೆ ಯೋಜನೆಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ ಮತ್ತು ಅಟಲ್ ಜಿ ಜನಸ್ನೇಹ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಜುಲೈ 02 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
(Kadugolla community:) ಈ ದಾಖಲೆ ಕಡ್ಡಾಯ:
* ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
* ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Kadugolla community:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





